ಮೊಪೆಡ್‍ಗೆ ಗೂಡ್ಸ್ ಆಟೋ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಮೊಪೆಡ್‍ಗೆ ಗೂಡ್ಸ್ ಆಟೋ ಡಿಕ್ಕಿ: ಸವಾರ ಸಾವು

April 26, 2018

ಚಾಮರಾಜನಗರ, ಏ.26(ಎಸ್‍ಎಸ್)- ಮೊಪೆಡ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೊಪೆಡ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಮಚವಾಡಿ ಗ್ರಾಮದ ಬಳಿ ಸಂಭವಿಸಿದೆ.

ಗ್ರಾಮದ ಅಂಗಡಿ ವ್ಯಾಪಾರಿ ಮಹದೇವನಾಯ್ಕ(60) ಸಾವನ್ನಪ್ಪಿದ ಸವಾರ. ಮಹದೇವನಾಯ್ಕ ಚಾಮರಾಜನಗರದಿಂದ ಅಂಗಡಿಗೆ ಬೇಕಾದ ಸಾಮಾನುಗಳನ್ನು ಖರೀದಿಸಿ ತನ್ನ ಮೊಪೆಡ್‍ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದನ್ನೆನ್ನಲಾಗಿದೆ. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಗೂಡ್ಸ್ ಆಟೋ ಅಮಚವಾಡಿ ಗ್ರಾಮದ ಬಳಿ ಡಿಕ್ಕಿ ಹೊಡೆಯಿತು. ಇದರಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಾಯಗೊಂಡಿದ್ದ ಮಹದೇವನಾಯ್ಕನನ್ನು ಚಾ.ನಗರದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಚಾ.ನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Translate »