ತಿ.ನರಸೀಪುರ, ಜ.18(ಎಸ್ಕೆ)-ಆಸ್ಪತ್ರೆಯ ಬೀಗ ಮುರಿದು ಲಕ್ಷಾಂತರ ರೂ.ಮೌಲ್ಯದ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಕುಪ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕುಪ್ಯ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳವು ನಡೆದಿದೆ. ಆಸ್ಪತ್ರೆಯ ಬೀಗ ಮುರಿದಿರುವ ಕಳ್ಳರು ಒಂದು ಲಕ್ಷ ರೂ. ಮೌಲ್ಯದ ಕಂಪ್ಯೂಟರ್, ಯುಪಿಎಸ್, ಟಿ.ವಿ, ಜೆರಾಕ್ಸ್ ಮೆಷಿನ್, ಪ್ರಿಂಟರ್ ಸೇರಿದಂತೆ ಹಲವು ಬೆಲೆ ಬಾಳುವ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಪಟ್ಟಣ ಠಾಣೆ ಪೆÇಲೀಸರು ಸ್ಥಳ ಪರಿಶೀಲಿಸಿದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಪೆÇಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಮೈಸೂರು ಗ್ರಾಮಾಂತರ