ಮೈಸೂರು, ಅ. 7(ಆರ್‍ಕೆ)- ಕೋವಿಡ್-19 ಪರಿಸ್ಥಿತಿ ತೀವ್ರ ಗೊಳ್ಳುತ್ತಿರುವುದರಿಂದ ಶಾಲಾ- ಕಾಲೇಜು ಆರಂಭಿ üಸಲು ಸರ್ಕಾರ ಆತುರಪಡು ತ್ತಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಇಂದಿಲ್ಲಿ ತಿಳಿಸಿದ್ದಾರೆ.
ಮೈಸೂರಿನ ಜಿಲ್ಲಾಧಿ ಕಾರಿ ಕಚೇರಿ ಬಳಿ ಸುದ್ದಿ ಗಾರರಿಗೆ ಪ್ರತಿಕ್ರಿಯಿಸಿದ ಅವರು, ಶಾಲಾ-ಕಾಲೇಜು ಆರಂಭಿ ಸುವ ವಿಚಾರದಲ್ಲಿ ನಮಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯ. ಈ ಸಂಬಂಧ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಆರೋಗ್ಯ, ಪೊಲೀಸ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸಮಾ ಲೋಚನೆ ನಡೆಸಿ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ತಜ್ಞರು ನೀಡುವ ವರದಿಯ ಆಧಾರದಲ್ಲಿ ಶಾಲಾ-ಕಾಲೇಜು ಆರಂಭಿ ಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅವರು ತಿಳಿಸಿದರು.
ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ದೇಶದ 16 ರಾಜ್ಯಗಳಲ್ಲಿ ನಿಗಾ ವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗಿರುವ ಕಾರಣ, ಮೈಸೂರು ದಸರಾ ಮಹೋತ್ಸವದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆಯೂ ಪ್ರಧಾನಮಂತ್ರಿಗಳು ಹೇಳಿರುವುದರಿಂದ ಸರ್ಕಾರ ಈ ಬಗ್ಗೆ ಗಂಭೀರ ಕ್ರಮ ವಹಿಸುತ್ತಿದೆ ಎಂದು ಶ್ರೀರಾಮುಲು ತಿಳಿಸಿದರು.
ಶಾಲೆಗಳನ್ನು ಆರಂಭಿಸುವ ಸಂಬಂಧ ಪೋಷಕರು, ಮನಶಾಸ್ತ್ರಜ್ಞರು, ವೈದ್ಯರೊಂದಿಗೆ ಕೌನ್ಸಿಲಿಂಗ್ ನಡೆಸಬೇಕಾಗಿದೆ. ಅವರ ಅಭಿಪ್ರಾಯವನ್ನೂ ಪಡೆದು, ತಜ್ಞರ ವರದಿಯನ್ನು ಅವಲೋಕಿಸಿದ ಮೇಲೆ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಸಚಿವರು ನುಡಿದರು.