ಸರ್ಕಾರದ ಯೋಜನೆಗಳು ಅರ್ಹರಿಗೆ ದೊರಕಲಿ
ಹಾಸನ

ಸರ್ಕಾರದ ಯೋಜನೆಗಳು ಅರ್ಹರಿಗೆ ದೊರಕಲಿ

August 9, 2018

ರಾಮನಾಥಪುರ: ಸರ್ಕಾರದ ಜನಪರ ಯೋಜನೆಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ದೊರಕಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.

ಹೋಬಳಿಯ ಲಕ್ಕೂರು ಗ್ರಾಪಂ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ಸ್ಥಳೀಯ ಹಿರಿಯರ ವೃದ್ಧಾಪ್ಯವೇತನ ಮತ್ತು ಸಾರ್ವಜನಿಕರ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಜನರ ಸಮಸ್ಯೆಗಳಿಗೆ ಸ್ವಂದಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹುಚ್ಚೀರೇಗೌಡ, ತಹಶೀಲ್ದಾರ್ ಎಲ್.ನಂದಿಶ್, ಇಓ ಡಾ.ಕೆ.ಎಲ್.ಯಶವಂತ್, ಆರ್.ಐ.ಸ್ವಾಮಿ ಡಾ.ಸ್ವಾಮೀಗೌಡ ಮುಂತಾದವರಿದ್ದರು.

Translate »