ರಾಜ್ಯದಲ್ಲಿ 11 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಸರ್ಕಾರ ಚಿಂತನೆ
ಚಾಮರಾಜನಗರ

ರಾಜ್ಯದಲ್ಲಿ 11 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಸರ್ಕಾರ ಚಿಂತನೆ

February 21, 2019

ಗುಂಡ್ಲುಪೇಟೆ: ರಾಜ್ಯಾದ್ಯಂತ 11 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯುವ ಉದ್ದೇಶ ಸರ್ಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಂ.ಪುಟ್ಟರಂಗಶೆಟ್ಟಿ ಹೇಳಿದರು.

ತಾಲೂಕಿನ ಹಂಗಳ ಗ್ರಾಮದಲ್ಲಿ ಸಾರ್ವ ಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋ ಜಿಸಿದ್ದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮತ್ತು ಪ್ರಯೋಗಾಲಯ ಉದ್ಘಾಟನೆ ಸಮಾ ರಂಭವನ್ನು ಉದ್ದೇಶಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಬದ ಲಾವಣೆ ತಂದು ಒಂದರಿಂದ ಹನ್ನೆರಡನೇ ತರಗತಿಯವರೆಗೆ ಒಂದೇ ಕಡೆ ಶಿಕ್ಷಣ ಕೊಡಿಸುವ ವ್ಯವಸ್ಥೆಯನ್ನು ಉನ್ನತೀಕರಿ ಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಮುಂದೆ ಸಾಗಿರುವ ಸರ್ಕಾರ ರಾಜ್ಯಾ ದ್ಯಂತ 11 ಸಾವಿರ ಪಬ್ಲಿಕ್ ಶಾಲೆ ತೆರೆಯುವ ಉದ್ದೇಶ ಹೊಂದಿದೆ. ಶೀಘ್ರದಲ್ಲೇ ಇದನ್ನು ಜಾರಿಗೆ ತರಲಾಗುತ್ತದೆ. ಈ ಮುಖಾಂತರ ಗುಣಾತ್ಮಕ ಶಿಕ್ಷಣವನ್ನು ಗ್ರಾಮಾಂತರ ಪ್ರದೇ ಶಕ್ಕೂ ಸಿಗುವಂತೆ ಮಾಡಲಾಗುವುದು ಎಂದರು. ಜಿಲ್ಲೆಯಲ್ಲಿ ಈಗಾಗಲೇ 48 ಸಮು ದಾಯ ಭವನಗಳು ನಿರ್ಮಾಣವಾಗಿದ್ದು, ಇನ್ನು ಹೆಚ್ಚಿನ ಭವನಗಳಿಗೆ ಅನುದಾನ ವನ್ನು ಸರ್ಕಾರದಿಂದ ಒದಗಿಸಲಾಗು ವುದು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ಜಿಲ್ಲೆಯ ಹೋಬಳಿ ಕೇಂದ್ರಗಳಲ್ಲಿ ಕೇಂದ್ರಿಯ ವಿದ್ಯಾ ಸಂಸ್ಥೆಗಳಲ್ಲಿ ನೀಡುವಂತಹ ಶಿಕ್ಷಣ ವ್ಯವಸ್ಥೆಯಂತೆ ಸಂಘಟನಾ ರೂಪದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಅದ ಕ್ಕಾಗಿ ಹೆಚ್ಚಿನ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಇಂತಹ ಯೋಜನೆಯನ್ನು ಶೀಘ್ರದಲ್ಲಿ ಜಾರಿಗೆ ತರುವ ಕಡೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ತಾಲೂಕಿನ ಎಲ್ಲಾ ಹೋಬಳಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳನ್ನು ತೆರೆದರೆ ಅನುಕೂಲ ವಾಗುವ ಜತೆಗೆ ಪದೇ ಪದೇ ಶಾಲೆಯ ಬದಲಾವಣೆ, ಖಾಸಗಿ ಶಾಲೆಗಳತ್ತ ಮಕ್ಕಳು ಹೋಗುವುದು ತಪ್ಪಲಿದೆ. ಅಲ್ಲದೆ ಗುಣ ಮಟ್ಟದ ಶಿಕ್ಷಣ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಸಿ.ಎಸ್. ನಿರಂಜನ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಲಿದೆ ಎಂದರು. ತಾಲೂ ಕಿನ ಎಲ್ಲಾ ಕಡೆ ನೀರಿನ ಸಮಸ್ಯೆ ಇದ್ದು, ಶೀಘ್ರದಲ್ಲೇ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಮಾರ್ಗ ಕಂಡುಕೊಳ್ಳ ಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾ ಯತಿ ಅಧ್ಯಕ್ಷ ಜಗದೀಶ್‍ಮೂರ್ತಿ, ಸದಸ್ಯ ಎಚ್.ಎನ್.ನಟೇಶ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಮಾಜಿ ಸಂಸದ ಎ.ಸಿದ್ದರಾಜು, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡ ಸೋಗೆ ಶಿವಬಸಪ್ಪ, ಬಿಇಒ ಡಾ.ಹಾಲತಿ ಸೋಮಶೇಖರ್, ಮುಖ್ಯ ಶಿಕ್ಷಕ ಪಿ.ರವಿ ಕುಮಾರ್ ಇತರರು ಇದ್ದರು.

Translate »