ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ:ಅರ್ಜಿ ಆಹ್ವಾನ
ಮೈಸೂರು

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ:ಅರ್ಜಿ ಆಹ್ವಾನ

June 9, 2019

ಮೈಸೂರು,ಜೂ.8-ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯ ಬಯಸುವವರಿಗೆÀ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವ್ಯಾಸಂಗದ ಕೋರ್ಸ್‍ಗಳು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಗಂಗಾ-ಕಲ್ಯಾಣ ನೀರಾವರಿ ಯೋಜನೆಗಳು ಲಭ್ಯವಿದೆ. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಾಗಿ ರಬೇಕು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/- ಒಳಗಿರಬೇಕು, ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು ಹಾಗೂ ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರಬೇಕು. ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು ಅಥವಾ http://10.10.29.73:81/uppardevelopment.karnataka.gov.in/public/ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಜುಲೈ 12 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2341194 ಸಂಪರ್ಕಿಸುವುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »