ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಪಂ ನೌಕರರ ಪ್ರತಿಭಟನೆ

ಮೈಸೂರು: ಬಾಕಿ ಇರುವ ವೇತನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಸದಸ್ಯರು ಮೈಸೂರಿನಲ್ಲಿ ಬುಧವಾರ ಬೃಹತ್ ಪ್ರತಿ ಭಟನಾ ಮೆರವಣಿಗೆ ನಡೆಸಿದರು.

ಮೈಸೂರಿನ ಗನ್‍ಹೌಸ್ ವೃತ್ತದಿಂದ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಗ್ರಾ.ಪಂ ನೌಕರರು ಚಾಮರಾಜ ಜೋಡಿ ರಸ್ತೆ, ರಾಮ ಸ್ವಾಮಿ ವೃತ್ತದ ಮೂಲಕ ಜಿ.ಪಂ ಕಚೇರಿಗೆ ತೆರಳಿ ಕೆಲಕಾಲ ಧರಣಿ ನಡೆಸಿ, ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ 61 ಸಾವಿರ ಗ್ರಾ.ಪಂ ನೌಕರರು ಸೇವೆ ಸಲ್ಲಿಸುತ್ತಿದ್ದು, ಈ ಎಲ್ಲಾ ನೌಕರರಿಗೆ ಕಳೆದ 1 ವರ್ಷದಿಂದ ಸರ್ಕಾರ ವೇತನ ನೀಡಿಲ್ಲ. ಕನಿಷ್ಠ ಕೂಲಿ, ತುಟ್ಟಿ ಭತ್ಯೆ ಸೇರಿದಂತೆ ಎಲ್ಲಾ ನೌಕರರಿಗೂ ವೇತನ ನೀಡಲು 830 ಕೋಟಿ ರೂ. ಬೇಕಾಗುತ್ತದೆ. ಕಳೆದ ವರ್ಷ ವೇತನ ನೀಡಲು ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿತ್ತು. ಆದರೆ ರೈತರ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಆ ಹಣವನ್ನು ಬಳಸಿಕೊಂಡಿ ರುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಹಣ ಬಿಡುಗಡೆ ಮಾಡದೆ ಇರುವುದರಿಂದ ನೌಕರರು ಸಂಕಷ್ಟಕ್ಕೀ ಡಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ ದರು. ವೇತನ ನೀಡುವುದಕ್ಕೆ ಸಂಬಂಧಿಸಿದಂತೆ ಅಪರ ಕಾರ್ಯದರ್ಶಿ ಸ್ವಾಮಿ ನೀಡಿರುವ ವರದಿಯಂತೆ ಎಲ್ಲ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ನೀಡಲು ಕ್ರಮ ಕೈಗೊಳ್ಳಬೇಕು. ಇಎಫ್‍ಎಂಎಸ್‍ಗೆ ಸೇರದಿರು ವವರ ವೇತನವನ್ನು ತೆರಿಗೆ ಸಂಗ್ರಹದಲ್ಲಿ ಕೊಡಬೇಕು. ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ಕೊಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕ ತೆರೆಯ ಬೇಕು. ಬಹಳ ದಿನಗಳಿಂದ ನೆನಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು. ನಿವೃತ್ತಿ ವೇತನ, ಗಳಿಗೆ ರಜೆ, ವಾರಕ್ಕೊಂದು ವೇತನ ಸಹಿತ ರಜೆ, ವೈದ್ಯ ಕೀಯ ವೆಚ್ಚ ಸರ್ಕಾರಿ ನೌಕರರಿಗೆ ನೀಡುವಂತೆ ಎಲ್ಲಾ ನೌಕರರಿಗೆ ನೀಡಬೇಕು. ಪಂಚಾಯತ್ ನೌಕರರಿಂದ ಬಿಲ್ ಕಲೆಕ್ಟರ್ ಹುz್ದÉಗೆ ಬಡ್ತಿ ನೀಡಬೇಕು. ಹೊಸ ಬಿಲ್ ಕಲೆಕ್ಟರ್‍ಗಳಿಗೆ ನೇಮಕಾತಿ ಮಾಡಬೇಕು ಎಂದು ಒತ್ತಾ ಯಿಸಿದರು.

ಪಂಚಾಯಿತಿ ನೌಕರರಿಂದ ಬಿಲ್ ಕಲೆಕ್ಟರ್ ಹುz್ದÉಗೆ ಬಡ್ತಿ ನೀಡಬೇಕು. ಹೊಸ ಬಿಲ್ ಕಲೆಕ್ಟರ್‍ಗಳನ್ನು ನೇಮಿಸಬೇಕು. ಬಿಲ್ ಕಲೆಕ್ಟರ್ ಹುz್ದÉಯಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುz್ದÉಗೆ ಬಡ್ತಿ ನೀಡಲು 2019 ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಪವಿತ್ರ ಕೇಸಿನಲ್ಲಿ ಸುಪ್ರಿಂಕೋರ್ಟ್ ತೀರ್ಪು ಬಂದಿದ್ದರಿಂದ ಪಿಡಿಒ ಬಡ್ತಿ, ಗ್ರೇಡ್-1 ಬಡ್ತಿ ನೀಡಿ ಖಾಲಿಯಾದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುz್ದÉಗೆ ನೇಮಕಾತಿ ಮಾಡಬೇಕು. ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‍ಗಳನ್ನು ಬಡ್ತಿಗೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಬಸವರಾಜು, ಮುಖಂಡರಾದ ಕೆ.ಬಸವ ರಾಜು, ಲೋಕೇಶ್ ಕಿರುಜಾಜಿ, ಟಿ.ಎಸ್.ದಿನೇಶ್, ಮಹೇಶ್, ರುಕ್ಮಿಣಿ, ಕುಮಾರ ಪಾಲ್ಗೊಂಡಿದ್ದರು.