‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸುವಂತೆ ಆಗ್ರಹ
ಹಾಸನ

‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸುವಂತೆ ಆಗ್ರಹ

July 10, 2019

ಸಮರ್ಪಕ ವೇತನ ನಿಗದಿಪಡಿಸಿ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
ಹಾಸನ,ಜು.9- ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರ ನ್ಯಾಯಯುತವಾದ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ಮಂಗಳವಾರ ಪಾಠ ಪ್ರವಚನ ಸ್ಥಗಿತಗೊಳಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಹ `ಪದವೀಧರ ಶಿಕ್ಷಕರು’ ಎಂದೇ ಪರಿಗಣಿಸಬೇಕು. ಸಮ ರ್ಪಕ ವೇತನ ಶ್ರೇಣಿ ನಿಗದಿಪಡಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದು ವರೆಸಬೇಕು ಎಂದು ಒತ್ತಾಯಿಸಿದರು.

3 ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಯಾಗಿಲ್ಲ. ಈಗಷ್ಟೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಮತ್ತೊಮ್ಮೆ ಅಕ್ಟೋಬರ್‍ನಲ್ಲಿ ಕೋರಿಕೆ ಮೇರೆಗೆ ವರ್ಗಾವಣೆ ನಡೆಸ ಬೇಕು. ಎಲ್‍ಕೆಜಿ, ಯುಕೆಜಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿಯೂ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿನ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸ ಬೇಕು. 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸು ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆವರೆಗೂ ಬಡ್ತಿ ನೀಡ ಬೇಕು. ಕೃಪಾಂಕ ಆಧರಿಸಿ ಶಿಕ್ಷಕರು ಮತ್ತು ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸುವ ಪತ್ರವನ್ನು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಸಲ್ಲಿಸಿ ದರು. ಈ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಸೆ.9ರ ಶಿಕ್ಷಕರ ದಿನಾಚರಣೆ ಬಹಿ ಷ್ಕರಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳ ಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಹಾಸನ ಜಿಲ್ಲೆಯ ಎಲ್ಲೆಡೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕಕರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ 1 ದಿನದ ಮಟ್ಟಿಗೆ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಲಾಗಿತ್ತು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಜಿ.ದ್ಯಾವೇಗೌಡ, ಖಜಾಂಚಿ ಎಂ.ಎಸ್. ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಅಣ್ಣಪ್ಪ, ನಾಯಕರಹಳ್ಳಿ ಮಂಜೇಗೌಡ, ಸರಕಾರಿ ನೌಕರರ ಸಂಘದ ನಿರ್ದೇಶಕ ರಾದ ರಮೇಶ್, ಸದಸ್ಯರಾದ ಲಕ್ಷ್ಮಣ್, ಕತ್ತಿ ಹಳ್ಳಿ ಪರಮೇಶ್, ಚೈತ್ರ ಮಂಜೇಗೌಡ, ಕಲ್ಲ ಹಳ್ಳಿ ಹರೀಶ್ ಇತರರು ಪಾಲ್ಗೊಂಡಿದ್ದರು.

Translate »