ಗ್ರಾಮ ಪಂಚಾಯಿತಿ ಉಪಚುನಾವಣೆ: ಮದ್ಯ ಮಾರಾಟ ನಿಷೇಧ
ಮೈಸೂರು

ಗ್ರಾಮ ಪಂಚಾಯಿತಿ ಉಪಚುನಾವಣೆ: ಮದ್ಯ ಮಾರಾಟ ನಿಷೇಧ

May 14, 2019

ಮೈಸೂರು: ಮೈಸೂರು ಜಿಲ್ಲೆಯ ಗ್ರಾಮಪಂಚಾಯಿತಿಗಳಲ್ಲಿ ತೆರವಾಗಿರುವ/ಖಾಲಿ ಉಳಿದಿರುವ ಒಟ್ಟು 13 ಗ್ರಾಮಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ಕ್ಷೇತ್ರ ಗಳ ವ್ಯಾಪ್ತಿಯಲ್ಲಿ ಕ್ಷೇತ್ರಗಳಿಗೆ ಒಳಪಡುವ ಗ್ರಾಮ ಗಳಲ್ಲಿ ಚುನಾವಣಾ ನೀತಿ ಸಂಹಿತೆಯು ಮೇ 13ರಿಂದ ಮೇ 31ರವರೆಗೆ ಜಾರಿಯಲ್ಲಿರುತ್ತದೆ.

ಮೈಸೂರು ತಾಲೂಕಿನ ಹಿನಕಲ್, ಯಡಕೊಳ ಹಾಗೂ ಆನಂದೂರು, ನಂಜನ ಗೂಡು ತಾಲೂಕಿನ ಹದಿನಾರು ಹಾಗೂ ಸಿಂಧುವಳ್ಳಿ, ತಿ.ನರಸೀಪುರ ತಾಲೂಕಿನ ತುರಗನೂರು ಹಾಗೂ ಬೆನಕನಹಳ್ಳಿ, ಹುಣಸೂರು ತಾಲೂಕಿನ ಹನಗೂಡು, ಕೆ.ಆರ್. ನಗರ ತಾಲೂಕಿನ ಸಿದ್ದಾಪುರ, ಪಿರಿಯಾಪಟ್ವಣ ತಾಲೂಕಿನ ದೊಡ್ಡಕಮರವಳ್ಳಿ ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಹೊಸಹೊಳಲು, ಹಂಚಿಪುರ ಹಾಗೂ ಸಾಗರೆ ಗ್ರಾಮಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಗ್ರಾಮಪಂಚಾಯಿತಿ ಕ್ಷೇತ್ರಗಳಲ್ಲಿ ಮುಕ್ತ ಹಾಗೂ ಶಾಂತ ರೀತಿಯಲ್ಲಿ ಚುನಾವಣೆ ನಡೆಸಲು ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು ) ನಿಯಮಗಳು 1967 ನಿಯಮ 10(ಬಿ) ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರದ ಮೇರೆಗೆ ಸದರಿ ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ (ಕ್ಷೇತ್ರಗಳಿಗೆ ಒಳಪಡುವ ಗ್ರಾಮಗಳೂ ಸೇರಿದಂತೆ) ಮೇ 13ರಿಂದ ಮೇ 31ರವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಲು ಹಾಗೂ ಮೊಹರು ಮಾಡಿ ಅದರ ಕೀಯನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅಭಿರಾಂ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.

Translate »