ಗ್ರಾಮ ಪಂಚಾಯಿತಿ ಉಪಚುನಾವಣೆ: ನಾಳೆ ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ

ಗ್ರಾಮ ಪಂಚಾಯಿತಿ ಉಪಚುನಾವಣೆ: ನಾಳೆ ಸಂತೆ, ಜಾತ್ರೆ ನಿಷೇಧ

June 13, 2018

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಜೂನ್ 14ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲೂಕಿನ ಬಾಗಳಿ ಹಾಗೂ ಯಳಂದೂರು ತಾಲೂಕಿನ ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ.ಎಂ. ಗಾಯತ್ರಿ ಆದೇಶ ಹೊರಡಿಸಿದ್ದಾರೆ.

ಮತದಾನ ದಿನದಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಬಾಗಳಿ ಹಾಗೂ ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂತೆ, ಜಾತ್ರೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Translate »