ಕೆ.ಆರ್.ಪೇಟೆ ತಾಲೂಕು ಅಂಬಿಗರಹಳ್ಳಿ ಬಳಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳಕ್ಕೆ ಅದ್ಧೂರಿ ಚಾಲನೆ
ಮಂಡ್ಯ

ಕೆ.ಆರ್.ಪೇಟೆ ತಾಲೂಕು ಅಂಬಿಗರಹಳ್ಳಿ ಬಳಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳಕ್ಕೆ ಅದ್ಧೂರಿ ಚಾಲನೆ

October 15, 2022

ಕೆ.ಆರ್.ಪೇಟೆ,ಅ.14- ನೀರು ನಮ್ಮ ಜೀವನಾಡಿಯಾಗಿದ್ದು, ಇದನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರಾಜ್ಯಸಭಾ ಸದಸ್ಯರೂ ಆದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಸಲಹೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಕೆ.ಆರ್.ಪೇಟೆ ತಾಲೂಕು ಅಂಬಿಗರಹಳ್ಳಿ ಬಳಿಯ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕಾರಿಯಾಗಿರುತ್ತವೆ. ಆಯುಧ ಪೂಜೆಯಲ್ಲಿ ನಾವು ಬಳಸುವಂತಹ ಆಯುಧಗಳು ಹಾಗೂ ವಸ್ತುಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು. ನೀರು ಕೃಷಿ, ಕೈಗಾರಿಕೆ ಮಾತ್ರವಲ್ಲ, ನಿತ್ಯದ ಕೆಲಸಕ್ಕೆ ಅನಿವಾರ್ಯ. ಅನಾವೃಷ್ಟಿ ಯನ್ನು ಅನುಭವಿಸಿದ ಸಂದರ್ಭದಲ್ಲಿ ಪ್ರತಿ ಹನಿ ನೀರಿನ ಬೆಲೆ ತಿಳಿದಿದೆ. ಪ್ರತಿ ದಿನ ನಲ್ಲಿಯಲ್ಲಿ ಸರಬರಾಜು ಆಗುತ್ತಿದ್ದ ನೀರು ಈಗ ನಿಗದಿತ ಸಮಯಕ್ಕೆ ಸೀಮಿತವಾಗುತ್ತಿದೆ. ಕೆ.ಆರ್.ಪೇಟೆಯಲ್ಲಿ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ನದಿಗಳು ಇಲ್ಲಿ ಸಂಗಮವಾಗಿವೆ. ಇಲ್ಲಿ ನೀರನ್ನು ಪೂಜಿಸಿ, ಅರಾಧಿಸಲು ಕುಂಭ ಮೇಳ ಹಮ್ಮಿಕೊಳ್ಳಲಾಗಿದೆ. ನೀವೂ ಪುಣ್ಯ ಸ್ನಾನ ಮಾಡಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೇಷ್ಮೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ಮೂರು ನದಿಗಳು ಸಮಾಗಮ ವಾಗುವ ಈ ತ್ರಿವೇಣಿ ಸಂಗಮದಲ್ಲಿ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಮಹಾ ಕುಂಭಮೇಳ ಆಚರಣೆ ಮಾಡುತ್ತಿ ದ್ದೇವೆ. ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಿಂದ ಭಕ್ತಾದಿಗಳು ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡು ಶ್ರೀ ಮಲೈ ಮಹದೇಶ್ವರ ಸ್ವಾಮಿಗೆ ಪೂಜೆಯನ್ನು ಸಲ್ಲಿಸಿ ಪುಣ್ಯ ಸ್ನಾನ ಮಾಡಿ, ಅದರ ಫಲ ವನ್ನು ಪಡೆದುಕೊಳ್ಳಿ ಎಂದು ಹೇಳಿದರು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‍ಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೆ.ಆರ್.ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭ ಮೇಳವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರು ವುದು ಬಹಳ ವಿಶೇಷÀ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿ ರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕøತಿಯನ್ನು ಜನ ಮಾನಸದಲ್ಲಿ ಬಿತ್ತಿ ಬೆಳೆ ಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕøತಿಯನ್ನು ಉಳಿ ಸುವ, ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

2014ರಲ್ಲಿ ನರೇಂದ್ರ ಮೋದಿ ಅವರು, ಭಾರತದ ಪ್ರಧಾನಿ ಸ್ಥಾನ ವಹಿಸಿಕೊಂಡಾಗಿನಿಂದಲೂ ಹಲವಾರು ಹಿಂದೂ ದೇವಾಲಯಗಳ ಗತ ವೈಭವ ಮರಳುವಂತೆ ಕ್ರಮವಹಿಸಿ ದ್ದಾರೆ. ಪ್ರಖ್ಯಾತ ದೇವಸ್ಥಾನಗಳ ಜೀರ್ಣೋದ್ದಾರ ನಡೆಸಲಾಗಿದೆ. ಕಾಶಿ ವಿಶ್ವನಾಥ ಧಾಮ, ಶ್ರೀ ಮಹಾಕಾಲ್ ಲೋಕ, ಕೇದಾರನಾಥ್ ದೇವಾಲಯ, ಸೋಮನಾಥ ದೇವಾಲಯ, ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದಾಗಿನಿಂದ ಅಲ್ಲೂ ದೇವಸ್ಥಾನಗಳ ಜೀರ್ಣೋದ್ದಾರ ನಡೆಸಲಾಗುತ್ತಿದೆ. ಇದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‍ಗಳನ್ನು ಅಭಿವೃದ್ದಿಗೊಳಿಸುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಮಾತನಾಡಿ, ಕಳೆದ 10 ವಷರ್Àಗಳಲ್ಲೇ ಅತೀ ಹೆಚ್ಚು ಅನುದಾನ ನೀಡುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಮುಜರಾಯಿ ಇಲಾಖೆಗೆ ಮಹತ್ವ ನೀಡಿದೆ. ಇದರಿಂದಾಗಿ 10 ಹಲವು ವಿಶೇಷ ಯೋಜನೆಗಳನ್ನು ಪ್ರಾರಂಭಿಸಲು ಸಾಧ್ಯವಾಗಿದೆ. ರಾಜ್ಯದಲ್ಲೂ ಕಾಶಿ, ಉಜ್ಜೈನಿಯಂತಹ ಕಾರಿಡಾರ್ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಒಲವು ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಪ್ರವಾಸ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಲ್ಲಿ ಅಭಿವೃದ್ದಿಗೊಳಿಸಲಾದ ಕಾರಿಡಾರ್‍ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸನ್ನು ಸಾಕಾರಗೊಳಿಸುವುದು ನಮ್ಮ ಉದ್ದೇಶವಾಗಿದೆ. ಮಹಾಕುಂಭ ಮೇಳದ ಕೀರ್ತಿ ಮನೆ ಮನೆಗಳಿಗೆ ತಿಳಿಯಬೇಕು. ಮೂರು ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನವನ್ನು ಮಾಡಿ ಭಗವಂತನ ಆಶೀರ್ವಾದವನ್ನು ಪಡೆಯೋಣ ಎಂದು ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ರಾಮಕೃಷÀ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ವಹಿಸಿದ್ದರು. ವೇದಿಕೆಯಲ್ಲಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್.ಹುಲ್ಮನಿ, ಪೆÇಲೀಸ್ ವರಿಷ್ಠಾಧಿüಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ, ಕುಂಭ ಮೇಳ ಸಂಯೋಜಕ ಸಣ್ಣ ಸ್ವಾಮಿಗೌಡ, ಮುಡಾ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳಿಕ ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳದ ಅಂಗವಾಗಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮಳವಳ್ಳಿ ಮಹದೇವಸ್ವಾಮಿ ಮತ್ತು ತಂಡದವರಿಂದ ಜಾನಪದ ಗೀತೆ ಗಾಯನ ನಡೆಯಿತು.

Translate »