ಪ್ರಮುಖ ನಾಯಕರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಸಂಗ್ರಹ
ಬೆAಗಳೂರು, ಏ.೮ (ಕೆಎಂಶಿ)-ಮುಖ್ಯಮAತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವ, ಸರ್ಕಾರದ ಕಾರ್ಯ ವೈಖರಿ ಹಾಗೂ ರಾಜ್ಯದಲ್ಲಿ ಪಕ್ಷದ ಸ್ಥಿತಿ ಕುರಿತಂತೆ ಬಿಜೆಪಿ ವರಿಷ್ಠರು ರಾಜ್ಯದ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹ ಆರಂಭಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ಆಯ್ದ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಪಕ್ಷ ಸಂಘಟನೆ ಮತ್ತು ಪಕ್ಷದ ಆಡಳಿತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಇದರ ನಡುವೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಕಾನೂನು ಸುವ್ಯವಸ್ಥೆಗೆ ಸಂಬAಧಿಸಿದAತೆ ಸುದೀರ್ಘ ವರದಿ ನೀಡಿದ್ದಾರೆ. ಕಳೆದ ಕೆಲವು ದಿನ ಗಳಿಂದ ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವಲಯಗಳಲ್ಲಿ ಕೇಳಿ ಬರುತ್ತಿದ್ದ ಮಾತು ಗಳು ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಮಿತ್ ಶಾ ಅವರು ರಾಜ್ಯ ಬಿಜೆಪಿಯ ಕೆಲ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಕೊಂಡು ವಾಸ್ತವದ ಮಾಹಿತಿ ಪಡೆಯುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಜೊತೆ ನಿನ್ನೆ ೩೦ ನಿಮಿಷಗಳ ಕಾಲ ಮುಖ್ಯಮಂತ್ರಿಯವರ ಕಾರ್ಯವೈಖರಿ, ಸರ್ಕಾರದ ನಡೆ, ಪಕ್ಷ ಸಂಘಟನೆ, ಮುಂಬ ರುವ ವಿಧಾನಸಭಾ ಚುನಾವಣೆಗೆ ಸಂಬA ಧಿಸಿದಂತೆ ವಿವರ ಪಡೆದಿದ್ದಾರೆ. ಅಷ್ಟೇ ಅಲ್ಲ ಬೊಮ್ಮಾಯಿ ಸಂಪುಟದಲ್ಲಿ ಸಚಿವರ ಕಾರ್ಯವೈಖರಿ ಮತ್ತು ಅವರ ನಡಾ ವಳಿಕೆಯ ಬಗ್ಗೆಯೂ ಮಾಹಿತಿ ಪಡೆದಿ ದ್ದಾರೆ. ವಿಧಾನಸಭಾ ಚುನಾವಣೆಯನ್ನು ಎದುರಿಸಲು ಜಾತಿ ಸಮೀಕರಣಕ್ಕೆ ಸಂಬAಧಿ ಸಿದಂತೆ ಯಾರ ನಾಯಕತ್ವದಲ್ಲಿ ಚುನಾವಣೆಗೆ ಹೋಗಬೇಕೆಂಬುದರ
ಬಗ್ಗೆಯು ಅವರಿಂದ ವಿವರಣೆ ಪಡೆದಿದ್ದಾರೆ. ಶೆಟ್ಟರ್ ಅವರನ್ನು ಭೇಟಿ ಮಾಡುವುದಕ್ಕೂ ಮೊದಲು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಅರುಣ್‌ಕುಮಾರ್, ರಾಜ್ಯ ಬಿಜೆಪಿ ಕಚೇರಿ ನಿರ್ವಹಣೆ ಮಾಡುತ್ತಿರುವ ನಿರ್ಮಲ್‌ಕುಮಾರ್ ಸುರಾನಾ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಒಂಭತ್ತು ಪ್ರಮುಖ ನಾಯಕರಿಂದ ಮಾಹಿತಿ ಪಡೆದಿದ್ದಾರೆ. ಒಂದೆರಡು ದಿನದಲ್ಲೇ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕಂದ್ಲಾಜೆ ಸೇರಿದಂತೆ ಇನ್ನೂ ಐದಾರು ಮುಖಂಡರ ಜೊತೆ ಶಾ, ರಾಜ್ಯ ರಾಜಕೀಯದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅಮಿತ್ ಶಾ ನಿನ್ನೆ ಶೆಟ್ಟರ್ ಭೇಟಿಯ ನಂತರ ರಾಜ್ಯ ಬಿಜೆಪಿ ಮತ್ತು ಸರ್ಕಾರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮಯಾವಕಾಶ ಕೇಳಿದರೂ, ಗೃಹ ಸಚಿವರು ಭೇಟಿಗೆ ಅವಕಾಶ ನೀಡಿರಲಿಲ್ಲ. ಬೊಮ್ಮಾಯಿ ದೆಹಲಿ ಬಿಡುತ್ತಿದ್ದಂತೆ ಶೆಟ್ಟರ್ ಅವರನ್ನು ಕರೆಸಿಕೊಂಡು ಮಾತನಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಭೇಟಿಯ ನಂತರ ಶೆಟ್ಟರ್‌ಗೆ ಭಾರೀ ಬೇಡಿಕೆ ಬಂದಿದೆ. ರಾಜ್ಯದ ಹಲವು ಬಿಜೆಪಿ ನಾಯಕರು ಅವರನ್ನು ಸಂಪರ್ಕಿಸಿ, ಚರ್ಚೆ ಮಾಡುತ್ತಿದ್ದಾರೆ. ದೆಹಲಿಯಲ್ಲೇ ಉಳಿದಿರುವ ಶೆಟ್ಟರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಏಪ್ರಿಲ್ ೧೬ ಮತ್ತು ೧೭ ರಂದು ರಾಜ್ಯ ಬಿಜೆಪಿ ಕಾರ್ಯಕಾರಣ ಹೊಸಪೇಟೆಯಲ್ಲಿ ಜರುಗಲಿದ್ದು, ಅದಕ್ಕೂ ಮುನ್ನ ವರಿಷ್ಠರು ಚುನಾವಣೆಯನ್ನು ಗಮನದಲ್ಲಿ ಟ್ಟುಕೊಂಡು ಸರ್ಕಾರ ಮತ್ತು ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಮುಂದಾಗಿದ್ದಾರೆ.