ಇಂದು ಅದ್ಧೂರಿ ಕೆಂಪೇಗೌಡ ಜಯಂತಿ

ಮೈಸೂರು, ಜೂ.26(ಪಿಎಂ)-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಸಮಿತಿ ಸಂಯು ಕ್ತಾಶ್ರಯದಲ್ಲಿ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮಹಾಲಿಂಗಂ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿ ದ್ದಾರೆ. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಅಂದು ಬೆಳಿಗ್ಗೆ 9ಕ್ಕೆ ಮೆರವಣಿಗೆಗೆ ಚಾಲನೆ ದೊರೆಯಲಿದ್ದು, ವಿವಿಧ ಕಲಾ ತಂಡಗಳೊಂದಿಗೆ ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದರು. ಸಂಘದ ಖಜಾಂಚಿ ಅಂಚಿ ಸಣ್ಣಸ್ವಾಮಿಗೌಡ, ನಿರ್ದೇಶಕರಾದ ಶಿವಕುಮಾರ್, ಜಿ.ಮಂಜು ಸುದ್ದಿಗೋಷ್ಠಿಯಲ್ಲಿದ್ದರು.