ಜಮ್ಮು-ಕಾಶ್ಮೀರ: ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ನಡೆಸಿದ ಆರೋಪಿಗಳನ್ನು ಬಂಧಿಸಿರುವುದಾಗಿ ಜಮ್ಮು- ಕಾಶ್ಮೀರ ಪೆÇಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ. ಜನದಟ್ಟಣೆಯ ಬಸ್ ನಿಲ್ದಾಣದಲ್ಲಿ ಶಂಕಿತ ಉಗ್ರ ನಡೆಸಿದ ಗ್ರೆನೇಡ್ ಸ್ಫೋಟದಿಂದಾಗಿ 17 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟು, 32 ಜನರು ಗಾಯ ಗೊಂಡಿದ್ದರು. ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷದ ಮೇನಿಂದಾಚೆಗೆ ಜಮ್ಮು ಬಸ್ ನಿಲ್ದಾಣದಲ್ಲಿ ಉಗ್ರರು ನಡೆಸಿರುವ 3ನೇ ಗ್ರೆನೇಡ್ ಸ್ಫೋಟ ಇದಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವಂತಹ ನಿಟ್ಟಿನಲ್ಲಿ ಈ ಸ್ಫೋಟ ನಡೆಸಿರುವ ಸಾಧ್ಯತೆ ಇದೆ ಎಂಬುದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಆಸ್ಪತ್ರೆಯ ಪ್ರಿನ್ಸಿಪಾಲ್ ಸುನಂದಾ ರೈನಾ ಹೇಳಿದ್ದಾರೆ. ಇಂದು ಮಧ್ಯಾಹ್ನ ಕೆಲವರು ಗ್ರೆನೇಡ್ ಸ್ಫೋಟ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಬಿ.ಸಿ. ರಸ್ತೆಯನ್ನು ಬಂದ್ ಮಾಡ ಲಾಗಿದೆ. ಗ್ರೆನೇಡ್ ಎಸೆದವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿ ದ್ದಾರೆ.
ಘಟನೆಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹಾನಿ ಯಾಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ತಪಾಸಣೆ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ಐಜಿಪಿ ಹೇಳಿದ್ದಾರೆ. ಕೋಮು ಸೌಹಾರ್ದತೆ ಹಾಗೂ ಶಾಂತಿಗೆ ಭಂಗ ತರುವಂತಹ ನಿಟ್ಟಿನಲ್ಲಿ ಈ ಸ್ಫೋಟ ನಡೆದಿದ್ದು, ಜನರು ಶಾಂತಿ ಕಾಪಾಡುವಂತೆ ತಿಳಿಸಲಾಗಿದೆ. ಪೆÇಲೀಸರು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸ್ಫೋಟ ಸಂಭವಿಸಿದ ಕೂಡಲೇ ಜನರು ಪ್ರಾಣಾಪಾಯದಿಂದ ಓಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಗಾಯಾಳು ಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಜಿಪಿ ಹೇಳಿದ್ದಾರೆ.