ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ
ಮೈಸೂರು

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ

June 1, 2019

ಬೆಂಗಳೂರು: ಕರ್ನಾಟಕ ಸುರಕ್ಷಿತ ವಲಯದಲ್ಲಿದ್ದು, ರಾಜ್ಯದ ಜನತೆ ಆತಂಕಪಡುವ ಅಗತ್ಯ ವಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ನಗರದ ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾದ ಹಿನ್ನೆಲೆಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಗ್ರೆನೇಡ್ ಇದ್ದರೂ, ಅದರಲ್ಲಿ ಸ್ಫೋಟಕ ವಸ್ತುಗಳು ಇರಲಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದರು.

ಹಳಿಗಳ ಮೇಲೆ ಗ್ರೆನೇಡ್ ಇರು ವುದನ್ನು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಾಂಬ್ ನಿರೋಧಕ ದಳ ಸ್ಥಳಕ್ಕೆ ಧಾವಿಸಿ, ಪರಿ ಶೀಲನೆ ನಡೆಸಿದೆ. ಗ್ರೆನೇಡ್‍ನಲ್ಲಿ ಸ್ಫೋಟಕ ಅಂಶಗಳಿರಲಿಲ್ಲ. ಆದರೂ ಹೆಚ್ಚಿನ ತನಿಖೆ ನಡೆಸುತ್ತಿರುವುದಲ್ಲದೆ, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಜನಸಂದಣಿಯ ಕೇಂದ್ರಗಳು, ಪ್ರಮುಖ ಸರ್ಕಾರಿ ಕಚೇರಿ ಕಟ್ಟಡ, ಅಣೆಕಟ್ಟು ಹಾಗೂ ಪ್ರವಾಸೋದ್ಯಮ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸುವಂತೆ ಆದೇಶ ಮಾಡ ಲಾಗಿದೆ ಎಂದರು. ವ್ಯಕ್ತಿಗಳ ಬಗ್ಗೆ ಇಲ್ಲವೆ ವಸ್ತುಗಳ ಬಗ್ಗೆ ಸಾರ್ವಜನಿಕವಾಗಿ ಸಂಶಯ ಕಂಡು ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡ ಬೇಕು ಮತ್ತು ಇವುಗಳ ಬಗ್ಗೆ ಎಚ್ಚರಿಕೆ ಇರಬೇಕು ಎಂದು ಗೃಹ ಸಚಿವರು ಸಲಹೆ ಮಾಡಿದ್ದಾರೆ. ರಾಜ್ಯವನ್ನು ಮತ್ತಷ್ಟು ಸುರಕ್ಷಿತ ವಲಯವನ್ನಾಗಿ ಮಾಡುವ ಉದ್ದೇಶದಿಂದ ಪಿಪಿಪಿ ಮಾದರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸಿಸಿ ಟಿವಿಗಳನ್ನು ಅಳವಡಿಸಲಾಗುವುದು. ಈಗಾಗಲೇ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವಿಶ್ವ ಹಾಗೂ ರಾಷ್ಟ್ರಮಟ್ಟದಲ್ಲಿ ಸುರಕ್ಷತೆಗಾಗಿ ಆಯಾ ದೇಶ ಮತ್ತು ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳನ್ನು ರಾಜ್ಯದಲ್ಲೂ ಅಳವಡಿಸಲು ಸರ್ಕಾರ ಮುಂದಾಗಿದೆ. ಆಡಳಿತ ಕೇಂದ್ರ ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ, ನಂತರ ಉಳಿದ ನಗರಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಜರುಗಿಸಲಾಗುವುದು ಎಂದರು. ತನಿಖೆಗೆ ಮತ್ತು ಕಾನೂನು ಸುವ್ಯವಸ್ಥೆ ಕಾರ್ಯಕ್ಕೆ ಪ್ರತ್ಯೇಕ ಅಧಿಕಾರಿಗಳನ್ನು ನೇಮಕ ಮಾಡುವ ಚಿಂತನೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳು ಸೇರಿದಂತೆ ಆಧುನಿಕ ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆಗೆ ಕಾಯಕಲ್ಪ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಹಿರಿಯ ಪೆÇಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿಯ ಆಧರಿಸಿ ಪೆÇಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿದ್ದು, ಇನ್ನೊಂದು ವಾರದೊಳಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Translate »