ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ವಿವಿಧ ಕಾಮಗಾರಿಗೆ ಶಾಸಕ ಜಿಟಿಡಿ ಚಾಲನೆ
ಮೈಸೂರು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ವಿವಿಧ ಕಾಮಗಾರಿಗೆ ಶಾಸಕ ಜಿಟಿಡಿ ಚಾಲನೆ

November 22, 2020

ಮೈಸೂರು, ನ.21(ಎಸ್‍ಬಿಡಿ)- ಮೈಸೂರಿನ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಟಿ. ದೇವೇಗೌಡರು ಶನಿವಾರ ಚಾಲನೆ ನೀಡಿದರು. ಮೈಸೂರು-ಗದ್ದಿಗೆ ಮುಖ್ಯ ರಸ್ತೆಯಿಂದ ಗಣಗರಹುಂಡಿ-ಸಾಹುಕಾರಹುಂಡಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು 50 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕೈಗೊಂಡಿದ್ದು, ಈ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು, ತಾಲೂಕು ಪಂಚಾಯ್ತಿ ಅನುದಾನದಲ್ಲಿ ಹುಯಿಲಾಳು ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ನಂತರ ನಾಗನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 75 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ, ಕಾಮನಕೆರೆಹುಂಡಿ ಗ್ರಾಮದಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಆಲನಹಳ್ಳಿ ಗಿರಿದರ್ಶಿನಿ ಬಡಾವಣೆಯಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ, ಕೆಬಿಎಲ್ ಬಡಾವಣೆಯ ವ್ಯಾಪ್ತಿಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಅರುಣ್ ಕುಮಾರ್, ನಾಗನಹಳ್ಳಿ ದಿನೇಶ್, ಮಾದೇಗೌಡ, ತಾಪಂ ಸದಸ್ಯರಾದ ಹುಯಿಲಾಳು ಭಾಗ್ಯ ರಮೇಶ್, ಮಹದೇವು, ತುಳಸಿ ಗೋವಿಂದರಾಜು, ಕಾರ್ಯ ನಿರ್ವಾಹಣಾಧಿಕಾರಿ ಕೃಷ್ಣಕುಮಾರ್, ತಹಶೀಲ್ದಾರ್ ರಕ್ಷಿತ್, ಎಇಇ ರಾಜು, ನಾಗರಾಜು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Translate »