ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಟಿಡಿ ಚಾಲನೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಟಿಡಿ ಚಾಲನೆ

September 30, 2018

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡರು ಶನಿವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ದರು. ಗಮಚನಹಳ್ಳಿ ಗ್ರಾಮದ ಎಸ್‍ಟಿ ಕಾಲೋನಿ ಯಲ್ಲಿ ಕಾಂಕ್ರೀಟ್ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿ (32.84 ಲಕ್ಷ ರೂ.), 120 ಲಕ್ಷ ರೂ. ಅಂದಾಜು ವೆಚ್ಚದ ದಾರಿಪುರ ಗ್ರಾಮದ ಒಳಚರಂಡಿ ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗಳಿಗೆ ಸಚಿವರು ಗುದ್ದಲಿ ಪೂಜೆ ಮಾಡಿದರು. ಬರಡನಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೂಲಸೌಲಭ್ಯ ಒದಗಿಸುವುದು, ಸೆಪ್ಟಿಕ್ ಟ್ಯಾಂಕ್ ನಿರ್ಮಾಣಕ್ಕೆ 23.94 ಲಕ್ಷ ರೂ ಕಾಮಗಾರಿಗೆ ಚಾಲನೆ ನೀಡಿದ ಜಿಟಿಡಿ ಅವರು, ಬರಡನಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ವನ್ನು ಉದ್ಘಾಟಿಸಿದರು. ತಾಲೂಕು ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿ ಸದಸ್ಯರು, ಜೆಡಿಎಸ್ ಕಾರ್ಯಕರ್ತರು ಹಾಗೂ ಮುಡಾ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

Translate »