ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ
ಮೈಸೂರು

ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ

September 26, 2018

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಇಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯ ವಿಚಾರಿಸಿದರು.

ಸುಮಾರು 15 ನಿಮಿಷಗಳ ಕಾಲ ಆಸ್ಪತ್ರೆ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ನಂತರ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಆರೋಗ್ಯವಾಗಿದ್ದಾರೆ. ಈಗಾಗಲೇ ಬಲಗೈಗೆ ಶಸ್ತ್ರ ಚಿಕಿತ್ಸೆ ಆಗಿದ್ದು, ಈಗ ಆರೋಗ್ಯವಾಗಿದ್ದಾರೆ. ಶೀಘ್ರ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವರು ಎಂದರು.

ನಿನ್ನೆಯಷ್ಟೇ ಸಂಭವಿಸಿದ್ದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರ ಪೈಕಿ ಇಂದು ನಟ ದೇವರಾಜ್, ಪುತ್ರ ಪ್ರಜ್ವಲ್ ಬಿಡುಗಡೆಯಾಗಿದ್ದಾರೆ ಎಂದು ಜಿ.ಟಿ.ದೇವೇಗೌಡರು ತಿಳಿಸಿದರು.

Translate »