ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿಟಿಡಿ ಚಾಲನೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿಟಿಡಿ ಚಾಲನೆ

February 6, 2020

ಮೈಸೂರು,ಫೆ.5-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಡಕೊಳ ಗ್ರಾಮದಲ್ಲಿ ಬುಧವಾರ ಕ್ಷೇತ್ರದ ಶಾಸಕ ಜಿ.ಟಿ.ದೇವೇ ಗೌಡ ಅವರು ವಿವಿಧ ಯೋಜನೆಗಳ ಅನುದಾನದಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕಡಕೊಳ ಗ್ರಾಮದಲ್ಲಿ ಉರ್ದು ಶಾಲೆ ಕಟ್ಟಡ ನಿರ್ಮಾ ಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಗೌಡರು, ನಂತರ ಜೈನರ ಬೀದಿ, ನಾಯಕರ ಬೀದಿಗಳ ಸಿಸಿ ರಸ್ತೆ, ಒಳಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಹರಿಜನರ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಿ ರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ವನ್ನೂ ಇದೇ ವೇಳೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆ ಗಳನ್ನು ಆಲಿಸಿದ ಶಾಸಕರು, ಶೀಘ್ರವಾಗಿ ಜನರ ಸಮಸ್ಯೆ ಗಳನ್ನು ನಿವಾರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿ ಗಳು, ತಾಲೂಕು ಪಂಚಾಯತಿ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Translate »