ಗುಂಡಯ್ಯನವರ ಸೇವೆ ಸ್ಮರಣೀಯ
ಮಂಡ್ಯ

ಗುಂಡಯ್ಯನವರ ಸೇವೆ ಸ್ಮರಣೀಯ

July 8, 2018

ಕೆ.ಆರ್.ಪೇಟೆ:  ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉನ್ನತ ಹುದ್ದೆಯ ಲ್ಲಿದ್ದ ಶೀಳನೆರೆ ಎಸ್.ಎಸ್.ಗುಂಡಯ್ಯ ನವರು ತಾಲೂಕಿನ 300ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಕೆಲಸ ಕೊಡಿಸುವ ಮೂಲಕ ಸಾವಿರಾರು ಕುಟುಂಬಕ್ಕೆ ಆಸರೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿಕುಮಾರ್ ತಿಳಿಸಿದರು.

ತಾಲೂಕು ಕಸಾಪ ವತಿಯಿಂದ ಪಟ್ಟಣದ ಗ್ರಾಮಭಾರತಿ ಶಿಕ್ಷಣ ಸಂಸ್ಥೆ ಸಭಾಂಗಣ ದಲ್ಲಿ ದಿ.ಎಸ್.ಎಸ್.ಗುಂಡಯ್ಯನವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಭಾವಗೀತೆ ಸ್ಪರ್ಧೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಎಸ್.ಎಸ್.ಗುಂಡಯ್ಯ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗುಂಡಯ್ಯನವರು ತಾವು ಮಾಡಿದ ಉತ್ತಮ ಕೆಲಸಗಳಿಂದಾಗಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಸುಲಭವಾಗಿ ಜಯಗಳಿ ದ್ದರು. ಶಾಸಕರಾಗದಿದ್ದರೂ, ತಾಲೂಕಿನ ಅಭಿವೃದ್ಧಿಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ಗುಂಡಯ್ಯನವರಂತಹ ವ್ಯಕ್ತಿಗಳು ಸಮಾಜ ದಲ್ಲಿ ಹೆಚ್ಚಾಗಬೇಕು. ಆಗ ಮಾತ್ರ ಸಮಾಜ ಹೆಚ್ಚು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕನ್ನಡ ಭಾಷೆ ಯಲ್ಲಿ 125ಕ್ಕೆ 125 ಅಂಕ ಗಳಿಸಿರುವುದು ಶ್ಲಾಘನೀಯ. ಮೊದಲು ಮಾತೃ ಭಾಷೆ ಮೇಲೆ ಪ್ರಭುತ್ವ ಸಾಧಿಸಿದರೆ ನಂತರ ಇತರೆ ಭಾಷೆಗಳನ್ನು ಸುಲಭವಾಗಿ ಕಲಿಯಲು ಸಾಧ್ಯವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿ ಉದ್ಯೋಗ ಗಿಟ್ಟಿಸಿ ಕೊಳ್ಳಲು ಮಾತೃಭಾಷೆ ಮೇಲಿನ ಹಿಡಿತ ಅಗತ್ಯ ಎಂದು ತಿಳಿಸಿದರು.

ಬಿಇಓ ಬಿ.ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಗುಂಡಯ್ಯ ದತ್ತಿ ದಾನಿಗಳು ಹಾಗೂ ಉಗ್ರಾಣ ನಿಗಮದ ನಿವೃತ್ತ ಪ್ರಾದೇಶಿಕ ವ್ಯವಸ್ಥಾಪಕ ಹೆಚ್.ಎಸ್. ಲಕ್ಷ್ಮೇಗೌಡ ಭಾವಗೀತೆಯಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಿದರು.

ಗ್ರಾಮ ಭಾರತಿ ವಿದ್ಯಾ ಸಂಸ್ಥೆ ಅಧ್ಯಕ್ಷ ಕಿರಣ್‍ಕುಮಾರ್ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿ ಸಿದರು. ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ಬಿ.ಬೋರೇಗೌಡರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಿದರು. ತಾಲೂಕು ಕಸಾಪ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರ ತೇಜಸ್ವಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೆಚ್.ಕೆ.ಮಂಜುನಾಥ್, ಎಸ್.ಎಂ.ಲಿಂಗಪ್ಪ ಡಿ.ಎಡ್ ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ರಘುಪತಿ, ಗ್ರಾಮ ಭಾರತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೃಷ್ಣ ಸೇರಿದಂತೆ ಮತ್ತಿತರರಿದ್ದರು.

Translate »