ಗುಂಡ್ಲುಪೇಟೆ: ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಹಾಗೂ ಪ್ರಚೋದನ ಕಾರಿ ಪೋಸ್ಟ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾ ಗುವುದು ಎಂದು ಪಟ್ಟಣದ ಪೊಲೀಸರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿಗೆ ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ದ ಮಾನಹಾನಿಕರ ಪೋಸ್ಟ್ ಹಾಕಿರುವ ಬಗ್ಗೆ ಆ. 26ರಂದು ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಳಿಕ ಪ್ರಧಾನಿ ನರೇಂದ್ರಮೋದಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಪ್ರತಾಪಸಿಂಹ ಹಾಗೂ ಶಾಸಕ ನಿರಂಜನಕುಮಾರ್ ವಿರುದ್ಧವೂ ಕಿಡಿಗೇಡಿಗಳು ಮಾನಹಾನಿಕರ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ಸಾಮಾಜಿಕ ಜಾಲತಣದಲ್ಲಿ ಪೋಸ್ಟ್ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಮುಂಖಡರು ದೂರು ನೀಡಿದ್ದರು. ಈ ಬಗ್ಗೆಯೂ ಪ್ರಕರಣ ದಾಖಲಿಸಲಾಗಿದೆ.
ಆದರೆ, ಈ ಬಗ್ಗೆ ಯಾವುದೇ ಅರಿಲ್ಲದ ಕೆಲವರು. ಪೋಸ್ಟ್ ಗಳಿಗೆ ಬೆಂಬಲಿಸುತ್ತಿ ದ್ದಾರೆ. ಇದರಿಂದ ರಾಜಕೀಯ ವೈಷಮ್ಯ, ಕೋಮು ದ್ವೇಷ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುತ್ತಿದೆ. ಇದನ್ನು ತಡೆಯುವ ಸಲುವಾಗಿ ಪೊಲೀಸರು ಈಗಾಗಲೇ ಸುಮಾರು 70ಕ್ಕೂ ಹೆಚ್ಚಿನವರ ಫೇಸ್ ಬುಕ್ ಪರಿಶೀಲಿಸಿ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದಾರೆ. ಫೇಸ್‍ಬುಕ್ ಖಾತೆ ಹೊಂದಿರುವವರು ಯಾವುದೇ ರಾಜಕೀಯ ಪಕ್ಷಗಳ ಮುಖಂಡರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಬಾರದು, ಇಂತಹ ಹೇಳಿಕೆಗಳಿಗೆ ಬೆಂಬಲ ಸೂಚಿಸಿ ಪ್ರಚೋದನೆ ಮಾಡಬಾರದು. ತಪ್ಪಿದಲ್ಲಿ ಅಂಥವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ಸರ್ಕಲ್ ಇನ್ಸ್‍ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.