ಗುಂಡ್ಲುಪೇಟೆ ಪಿಕಾರ್ಡ್ ಬ್ಯಾಂಕ್  ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚಾಮರಾಜನಗರ

ಗುಂಡ್ಲುಪೇಟೆ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

February 28, 2020

ಗುಂಡ್ಲುಪೇಟೆ, ಫೆ.27 (ಸೋಮ್.ಜಿ)- ಇಲ್ಲಿನ ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷ ರಾಗಿ ಎನ್.ಮಲ್ಲೇಶ್ ಮತ್ತು ಉಪಾಧ್ಯಕ್ಷ ರಾಗಿ ಗೌರಮ್ಮ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಇಲ್ಲಿನ ಪಿಕಾರ್ಡ್ ಆಡಳಿತ ಮಂಡಳಿಯಲ್ಲಿ ಒಟ್ಟು 14 ಮಂದಿ ನಿರ್ದೇ ಶಕರಿದ್ದು, ಬಿಜೆಪಿ 10 ಮತ್ತು ಕಾಂಗ್ರೆಸ್ 4 ನಿರ್ದೇಶಕರಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಎನ್.ಮಲ್ಲೇಶ್ ಮತ್ತು ಉಪಾಧ್ಯಕ್ಷರಾಗಿ ಗೌರಮ್ಮ ಅವಿರೋಧವಾಗಿ ಆಯ್ಕೆಯಾದರು.

ಈ ವೇಳೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಮಾತನಾಡಿ, ರೈತರ ಹಿತ ಕಾಪಾಡಿ ಉತ್ತಮ ಆಡಳಿತ ನಡೆಸುವುದರೊಂದಿಗೆ ಕ್ಷೇತ್ರದ ಗೌರವವನ್ನು ಮತ್ತಷ್ಟು ಹೆಚ್ಚಿಸಿ ಎಂದು ನೂತನ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ಎನ್.ಮಲ್ಲೇಶ್ ಮಾತ ನಾಡಿ, ನಾನು ಅಧ್ಯಕ್ಷನಾಗಿ ಅವಿರೋಧ ಆಯ್ಕೆಯಾಗಲು ಕಾರಣಕರ್ತರಾದ ಶಾಸಕರು ಮತ್ತು ಎಲ್ಲಾ ನಿರ್ದೇಶಕರು ಹಾಗೂ ಪಕ್ಷದ ವರಿಷ್ಠರಿಗೆ ಧನ್ಯವಾದ ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ರೈತರ ಹಿತಾಸಕ್ತಿ ಕಾಪಾಡಿಕೊಂಡು ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದರು. ಈ ವೇಳೆ ಪಕ್ಷದ ಮುಖಂಡರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.

Translate »