ದೇಶದಲ್ಲಿ ಗುರುವಿಗೆ ಮಹತ್ತರ ಸ್ಥಾನ
ಕೊಡಗು

ದೇಶದಲ್ಲಿ ಗುರುವಿಗೆ ಮಹತ್ತರ ಸ್ಥಾನ

July 30, 2018

ಸುಂಟಿಕೊಪ್ಪ:  ದೇಶದಲ್ಲಿ ಗುರುವಿಗೆ ಮಹತ್ತರ ಸ್ಥಾನವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ತ್ಯಾಗ ಮನೋಭಾವನೆಯಿಂದ ಸಮಾಜ ಕಟ್ಟುವ ಕೆಲಸ ವನ್ನು ನಿರ್ವಹಿಸುತ್ತಿದ್ದು, ಯಾವುದೇ ಪ್ರತಿಫಲಾಪೇಕ್ಷೆ ನಿರೀಕ್ಷಿಸದೆ ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದು ರಾಷ್ಟ್ರೀಯ ಸೇವಕ ಸಂಘದ ಜಿಲ್ಲಾ ಸಂಚಾಲಕ ಬೌದ್ದಿಕ್ ಅವಿನಾಶ್ ಹೇಳಿದರು.

ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಗುರು ಪೂಜೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದ ಗುರುಕುಲದಲ್ಲಿ ಗುರುಗಳು ತ್ಯಾಗ ಮನೋಭಾವ ದಿಂದ ಶಿಕ್ಷಣವನ್ನು ಶಿಷ್ಯರಿಗೆ ಧಾರೆಯೆರೆಯುತ್ತಿದ್ದರು. ಶಿಷ್ಯರು ಅಷ್ಟೇ ಗೌರವವನ್ನು ಗುರುಗಳಿಗೆ ಸಲ್ಲಿಸುತ್ತಿದ್ದರು ಎಂದರು. ಯಾವುದೇ ಸಂಸ್ಥೆ ಸಂಘಟನೆ ಬೆಳೆಯಲು ಆರ್ಥಿಕ ಸಂಪನ್ಮೂಲ ಅಗತ್ಯ. ಸ್ವಯಂ ಸೇವಕರು ಸಮರ್ಪಣಾ ಭಾವದಿಂದ ಸಂಘಟನೆಯಲ್ಲಿ ತೊಡಗಿರುವುದರಿಂದ ಭಾರತೀಯ ಪರಂಪರೆಯಲ್ಲಿ ತನ್ನದೇ ಪದ್ಧತಿ ಗಳನ್ನು ರೂಪಿಸಿಕೊಂಡು ಕಳೆದ 92 ವರ್ಷಗಳಿಂದ ಸಂಘ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾಜಕ್ಕಾಗಿ ಪ್ರತಿಯೊಬ್ಬರು ತನ್ನದೇ ಆದ ಕೊಡುಗೆಯನ್ನು ನೀಡಬೇಕು. ಆ ನಿಟ್ಟಿನಲ್ಲಿ ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದರು.

ಅಧ್ಯಕ್ಷತೆಯನ್ನು ಕಾಫಿ ಬೆಳೆಗಾರರಾದ ಗಣೇಶ್ ಮಹೇಂದ್ರ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ವಯಂ ಸೇವಕ ರಾಖೇಶ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಸ್ವಯಂ ಸೇವಕ ರಾದ ವೇಲುಮುರುಗೇಶ್, ಸೂರ್ಯಕಾಂತ್, ರಮೇಶ್, ಗುಣಶೀಲ, ಕುಶಾಲನಗರ ವಿಶ್ವನಾಥ ರೈ, ಸುಂಟಿಕೊಪ್ಪದ ಹಿಂದೂ ಬಾಂಧವರು ಉಪಸ್ಥಿತರಿದ್ದರು.

Translate »