ಜು.27ರಂದು ಕಾಗಿನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಮೈಸೂರು

ಜು.27ರಂದು ಕಾಗಿನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ

July 15, 2018

ಮೈಸೂರು:  ಗುರು ಪೂರ್ಣಿಮಾ ಮಹೋತ್ಸವದ ಅಂಗವಾಗಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜು.27ರಂದು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಶಾಖಾ ಮಠದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇವಣಸಿದ್ದೇಶ್ವರ ಮಹಾ ಸಂಸ್ಥಾನದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳಿಗೆ ಗುರುವಂದನೆ ನಡೆಸಲಾಗುವುದು.
ಕೆಲ್ಲೋಡು ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕೆ.ಆರ್.ನಗರ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಶಿವಮೊಗ್ಗ ಕುರುಬರ ಜಡೆ ದೇವರ ಪೀಠದ ಸ್ವಾಮಿ ಅವೋಘ ಸಿದ್ದೇಶ್ವರಾನಂದ ಇನ್ನಿತರರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಈ ಬಾರಿ ಮೈಸೂರು ಶಾಖಾ ಮಠದಿಂದ ಗುರು ಪೂರ್ಣಿಮಾ ಮಹೋತ್ಸವಕ್ಕೆ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ತೆರಳುವ ನಿರೀಕ್ಷೆ ಇದೆ. ಬರುವ ಭಕ್ತರಿಗೆ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಪಾಲಿಕೆ ಸದಸ್ಯ ಎಂ.ಕೆ.ಶಂಕರ್, ಎಪಿಎಂಸಿ ನಿರ್ದೇಶಕ ಪ್ರಭುಸ್ವಾಮಿ, ಪ್ರದೇಶ ಕುರುಬರ ಸಂಘದ ನಿರ್ದೇಶಕ ಸುಬ್ರಹ್ಮಣ್ಯ, ಹಾಲುಮತ ಮಹಾಸಭಾ ನಿರ್ದೇಶಕ ವಿಜಯಕುಮಾರ್, ಬಿಎಸ್‍ಎನ್‍ಎಲ್ ಮಹದೇವೇಗೌಡ, ಮಂಜುನಾಥ್ ಉಪಸ್ಥಿತರಿದ್ದರು.

Translate »