ಇಂದು ಜಿಲ್ಲಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ

ಮೈಸೂರು: ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಸಮಿತಿ ವತಿಯಿಂದ ಜು.27ರಂದು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಡುಕನಪುರ ಹಲವಾರು ಮಠದ ಶ್ರೀ ಷಡಕ್ಷರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ವಿಧಾನಸಭಾ ಸದಸ್ಯ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಡಾ.ಸಿ.ನಾಗಣ್ಣ ಮುಖ್ಯ ಭಾಷಣ ಮಾಡಲಿದ್ದಾರೆ.

ಮೇಯರ್ ಬಿ.ಭಾಗ್ಯವತಿ, ಜಿ.ಪಂ. ಅಧ್ಯಕ್ಷೆ ನಯಿಮಾ ಸುಲ್ತಾನ ನಜೀರ್ ಅಹಮದ್, ಸಂಸದರಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ವಿಧಾನಸಭಾ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್‍ಕುಮಾರ್, ತನ್ವೀರ್‍ಸೇಠ್, ಕೆ.ಮಹದೇವ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು, ಎಂಎಲ್‍ಸಿಗಳಾದ ಎಸ್.ನಾಗರಾಜು, ಮರಿತಿಬ್ಬೇಗೌಡ, ಆರ್.ಧರ್ಮಸೇನ, ಕೆ.ಟಿ.ಶ್ರೀಕಂಠೇಗೌಡ, ಕೆ.ವಿ.ನಾರಾಯಣಸ್ವಾಮಿ, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಇನ್ನಿತರರು ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ಕಲಾಮಂದಿರದಲ್ಲಿ ಮೈಸೂರಿನ ಕೆ.ರವೀಂದ್ರ ಮತ್ತು ತಂಡದಿಂದ ವಚನ ಗಾಯನ ನಡೆಯಲಿದೆ.