ಹಾಸನ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬರ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ 8 ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಿತವಾಗಿದ್ದು ಜನ ಜಾನುವಾರುಗಳಿಗೆ ನೀರಿನ ಯಾವುದೇ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾ ಯಿಸಿ ಎಂದು ನಿರ್ದೇಶನ ನೀಡಿದರು.
ವಿವಿಧ ಇಲಾಖೆ ಅಧಿಕಾರಿಗಳಿಂದ ಮಳೆ, ಬೆಳೆ, ಜಾನುವಾರುಗಳ ಮೇವಿನ ಲಭ್ಯತೆಗಳ ಬಗ್ಗೆ ಮಾಹಿತಿ ಪಡೆದ ನವೀನ್ ರಾಜ್ ಸಿಂಗ್ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಿ ಕೊಂಡು ಮಳೆ ಬಿದ್ದ ತಕ್ಷಣ ಬೇಡಿಕೆಯನು ಸಾರ ಪೂರ್ಣಗೊಳಿಸಿ ಎಂದು ಹೇಳಿದರು.
ಮೇವಿನ ಕೊರತೆ ಎದುರಾಗಬಹು ದಾದ ಅರಸೀಕೆರೆ ತಾಲೂಕಿನಲ್ಲಿ ಅವಶ್ಯ ಕತೆ ಬಿದ್ದಾಗ ಮೇವಿನ ಬ್ಯಾಂಕ್ ಮತ್ತು ಗೋಶಾಲೆ ಪಡೆಯಲು ಸೂಕ್ತ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಅವರು ಪಶು ಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಬರಪರಿಹಾರ ಯೋಜನೆಗಳಡಿ ಕುಡಿ ಯುವ ನೀರಿನ ಕಾಮಗಾರಿಗಳನ್ನು ತ್ವರಿತ ವಾಗಿ ಪೂರ್ಣಗೊಳಿಸಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಡಿ ಉಂಟಾಗಿರುವ ಬೆಳೆ ಹಾನಿಗಳಿಗೆ ಸೂಕ್ತ ರೀತಿ ಪರಿಹಾರ ಒದ ಗಿಸಿ ಎಂದು ಜಿಲ್ಲಾ ಪಂಚಾಯಿತಿ ಕುಡಿ ಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲೆನಾಡು ಪ್ರದೇಶದಲ್ಲಿ ಮಂಗನ ಕಾಯಿಲೆ ಹರಡುತ್ತಿದೆ. ಜಿಲ್ಲೆಯು ಶಿವ ಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೊಂದಿಕೊಂಡಿದೆ ಹಾಗಾಗಿ ಸಾರ್ವ ಜನಿಕರಿಗೆ ಮಂಗನ ಕಾಯಿಲೆ ಸ್ವರೂಪ ಮಂಗಗಳಿಂದ ದನಕರುಗಳಿಗೆ ಹೇಗೆ ರೋಗಾಣುಗಳು ಉಣ್ಣೆಯ ಮೂಲಕ ಹರಡುತ್ತವೆ ಮತ್ತು ಯಾವ ಸ್ವರೂಪದಲ್ಲಿ ಮನುಷ್ಯ ಮತ್ತು ನಂತರದಲ್ಲಿ ಅದು ಮಂಗ ಗಳಿಗೆ ಮಾರಣಾಂತಿಕವಾಗುತ್ತಿದೆ ಎಂಬ ಬಗ್ಗೆ ಅರಿವು ಮೂಡಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ದರ್ಶಕರ್ ಆ್ಯಪ್ ಮೂಲಕ ಬೆಳೆ ವಿವರ ಸಮೀಕ್ಷೆಯಿಂದ ಹಲವು ಅನು ಕೂಲಗಳಾಗುತ್ತಿದ್ದು ಸಮರ್ಪಕವಾಗಿ ಮಾಹಿತಿ ಗಣಕೀಕರಣವಾಗುವಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿಜಯ ಪ್ರಕಾಶ್ ಅವರು ಜಿಲ್ಲೆಯ ಬರ ಪರಿಸ್ಥಿತಿ ಕುಡಿ ಯುವ ನೀರಿನ ಪೂರೈಕೆಗೆ ಕೈಗೊಂಡಿ ರುವ ಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲೆಯಲ್ಲಿ ಈ ವರ್ಷ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿಭಾಯಿಸ ಲಾಗಿದೆ ಚುನಾವಣಾ ಕರ್ತವ್ಯದ ಜೊತೆಗೆ ಜನ ಸಾಮಾನ್ಯರ ಜೀವನ ನಿರ್ವಹಣೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಯೋಜನಾ ನಿರ್ದೇಶಕ ಅರುಣ್‍ಕುಮಾರ್, ಜಂಟಿ ಕೃಷಿ ನಿರ್ದೇಶಕ ಡಾ.ಮಧುಸೂಧನ್, ತೋಟ ಗಾರಿಕೆ ಉಪ ನಿರ್ದೇಶಕ ಮಂಜುನಾಥ್, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ವೀರಭದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ.ಸತೀಶ್, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿ ಯಂತರ ಮಂಜುನಾಥ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಸುಧಾ ಮತ್ತಿತರರು ಹಾಜರಿದ್ದರು.
ಜಿಲ್ಲೆಯಲ್ಲಿ ಅಂತರ್ಜಲ ಸಂರಕ್ಷಣೆ ಬಗ್ಗೆ ವ್ಯಾಪಕ ಅರಿವು ಮೂಡಿಸ ಬೇಕು. ನೀರಿನ ಸದ್ಬಳಕೆ ಬಗ್ಗೆ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು
– ನವೀನ್ ರಾಜ್ ಸಿಂಗ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ