ವಿಷ ಪ್ರಸಾದ: ಹಂತಕರಿಗೆ   ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ವಿಷ ಪ್ರಸಾದ: ಹಂತಕರಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

January 3, 2019

ಮೈಸೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ 17 ಭಕ್ತರ ಸಾವಿಗೆ ಕಾರಣರಾದ ಪಾತಕಿಗಳಿಗೆ ಜಾಮೀನು ಮಂಜೂರು ಮಾಡದೇ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ದರು. ಮೈಸೂರಿನ ನ್ಯಾಯಾಲಯದ ಮುಂಭಾಗ ವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಸಿದ ಸಮಿತಿ ಕಾರ್ಯಕರ್ತರು, ದೇವಾಲಯದ ಆಸ್ತಿ ಕಬಳಿಸುವ ದುರುದ್ದೇಶದಿಂದ ದುರುಳರು ಪ್ರಸಾದಕ್ಕೆ ವಿಷ ಬೆರೆಸಿದ್ದಾರೆ. ಇದರಿಂದ 17 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಆರೋಪಿ ಗಳ ಪರ ವಕಾಲತ್ತು ವಹಿಸುವುದರಿಂದ ವಕೀಲರು ಹಿಂದೆ ಸರಿದಿರುವುದು ಶ್ಲಾಘನೀಯ. ಆರೋಪಿಗಳಿಗೆ ಜಾಮೀನು ಮಂಜೂರು ಮಾಡದೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿ ಭಟನೆಯಲ್ಲಿ ಸಮಿತಿ ಪ್ರಧಾನ ಸಂಚಾಲಕ ರಾಜೇಶ್‍ಗೌಡ, ಡೈರಿ ವೆಂಕಟೇಶ್, ತ್ಯಾಗರಾಜ, ಸದಾನಂದ, ಕೆ.ಎಸ್.ಶಿವರಾಂ ಇನ್ನಿತರರು ಪಾಲ್ಗೊಂಡಿದ್ದರು.

Translate »