ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ:  ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್.ವಿಶ್ವನಾಥ್
ಮೈಸೂರು

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ: ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್.ವಿಶ್ವನಾಥ್

August 26, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಯಾರೂ ತುಳಿದಿಲ್ಲ. ಅವರ ನಡವಳಿಕೆಯಿಂದ ಅವರನ್ನು ಅವರೇ ತುಳಿದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಶಾಸಕ ಎ.ಹೆಚ್.ವಿಶ್ವನಾಥ್ ಹೇಳಿದರು.

ಸಿದ್ದರಾಮಯ್ಯನವರಿಗೆ ಮತ್ತೇ ಮುಖ್ಯ ಮಂತ್ರಿ ಆಗುವ ಆಸೆ ಇದೆ. ಅದು ತಪ್ಪೇ ನಲ್ಲ. ಅವರು ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ ಎಂದರು. ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಕಿಡಿಕಾರಿದ್ದಕ್ಕೆ ವಿಶ್ವನಾಥ್ ಅಸಮಾಧಾನ ವ್ಯಕ್ತ ಪಡಿಸಿದರು. ಸಾ.ರಾ.ಮಹೇಶ್ ನಮ್ಮ ಸಚಿವರು. ಪ್ರಜಾಪ್ರಭುತ್ವದಲ್ಲಿ ಸಚಿವರು ಎಂದರೆ ಸರ್ಕಾರ. ಹೀಗಿರುವಾಗ ಕೇಂದ್ರ ಸಚಿವರು ಕೇರ್‍ಲೆಸ್ ಆಗಿ ಮಾತನಾಡಬಾರದಿತ್ತು ಎಂದರು.

ಜಾರಕಿಹೊಳಿ ಪ್ರತಿಕ್ರಿಯೆ: ಕಾಂಗ್ರೆಸ್ 120 ಸ್ಥಾನಗಳನ್ನು ಗಳಿಸಿದ್ದರೆ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯ ಮಂತ್ರಿಯಾಗಬಹುದಿತ್ತು. ಆದರೆ, ರಾಜ್ಯದ ಜನತೆ ಅದಕ್ಕೆ ಅವಕಾಶ ಮಾಡಿ ಕೊಡಲಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

Translate »