ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ
ಕೊಡಗು, ಮೈಸೂರು

ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ

July 8, 2018

ಕುಶಾಲನಗರ: ಕೊಡಗಿನಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನಲೆ ಯಲ್ಲಿ ಹಾರಂಗಿ ಜಲಾಶಯ ಭರ್ತಿಯಾ ಗಿದ್ದು, ಶನಿವಾರ ಸಂಜೆ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‍ಗಳಿಂದ ನದಿಗೆ 1200 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ.

ಕಾವೇರಿ ಕಣಿವೆಯ ಪ್ರಮುಖ ಜಲಾ ಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ ಇದ್ದು, ಜಲಾ ಶಯದ ಇಂದಿನ ನೀರಿನ ಮಟ್ಟ 2856 ಅಡಿ (ಸಂಜೆ 5 ಗಂಟೆಗೆ) ಇತ್ತು. ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ನೀರಿನ ಮಟ್ಟ ಕಾಯ್ದುಕೊಳ್ಳಲಾಗುತ್ತಿದೆ. ಜಲಾಶಯಕ್ಕೆ 24450 ಕ್ಯೂಸೆಕ್ ಒಳಹರಿವು ಇದೆ.

ಜಲಾಶಯ ಮತ್ತು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಾಲ್ಕು ಗೇಟ್‍ಗಳಿಂದ ನೀರನ್ನು ನದಿಗೆ ಹರಿಸಲಾಯಿತು ಎಂದು ನೀರಾ ವರಿ ಇಲಾಖೆ ಅಧೀಕ್ಷಕ ಅಭಿಯಂತರ ಪ್ರಸಾದ್ ತಿಳಿಸಿದರು. 8.5 ಟಿಎಂಸಿ ನೀರು ಸಾಮಥ್ರ್ಯದ ಹಾರಂಗಿ ಜಲಾಶಯದಲ್ಲಿ ಇದೀಗ 7.25 ಟಿಎಂಸಿಗಳಷ್ಟು ನೀರು ಶೇಖರಣೆಯಾಗಿದೆ. ಶನಿವಾರ ಹಾರಂಗಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ 5.93 ಮಿ.ಮೀ. ಮಳೆ ದಾಖಲಾಗಿದೆ. ಜಲಾಶಯದ ಕ್ರೆಸ್ಟ್ ಗೇಟ್‍ಗಳ ಮೂಲಕ ಹಾಲಿನ ನೊರೆಯಂತೆ ಧುಮ್ಮಿಕ್ಕುವ ನೀರಿನ ದೃಶ್ಯ ನಯನ ಮನೋಹರವಾಗಿದೆ. ಜಲಾ ಶಯದಿಂದ ನೀರು ಹರಿಸುವ ಮುನ್ನ ತಗ್ಗುಪ್ರದೇಶದ ಜನರಿಗೆ, ಮೀನುಗಾರರಿಗೆ, ನದಿಯ ಆಸುಪಾಸಿನಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲು ಮೂರು ಭಾರಿ ಸೈರನ್ ಮೊಳಗಿಸಲಾಯಿತು.

ಜಲಾಶಯದಿಂದ ನೀರು ಬಿಟ್ಟ ವಿಷಯ ತಿಳಿದ ಸುತ್ತಮುತ್ತಲಿನ ಜನರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಿ, ಸಂಭ್ರಮಿಸಿದರು. ಈ ಬಾರಿ ಉತ್ತಮ ಮಳೆ ಬಿದ್ದ ಹಿನ್ನಲೆಯಲ್ಲಿ ಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹರ್ಷ ಚಿತ್ತರಾಗಿದ್ದಾರೆ. ನದಿ ತೀರದಲ್ಲಿ ವಾಸಿಸುತ್ತಿರುವ ಜನರು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಧರ್ಮರಾಜ್ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಜಲಾಶಯವು ಜುಲೈ 23 ರಂದು ಭರ್ತಿಯಾಗಿತ್ತು. ಈ ಬಾರಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ 15 ದಿನ ಮುಂಚಿತವಾಗಿ ಜುಲೈ ಮೊದಲ ವಾರದಲ್ಲೇ ಭರ್ತಿಯಾಗಿದೆ.

ಹಾರಂಗಿ ಜಲಾಶಯದಿಂದ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಸೇರಿದಂತೆ 1.5 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರು ಪೂರೈಸಲಾ ಗುತ್ತಿದೆ. ಹಾರಂಗಿ ಜಲಾಶಯದಿಂದ ಹರಿಯುವ ನೀರು ಕೂಡಿಗೆ ಬಳಿ ಹಾರಂಗಿ ನದಿ ಮೂಲಕ ಕಾವೇರಿ ನದಿ ಸೇರಿ ನಂತರ ಕೃಷ್ಣರಾಜಸಾಗರವನ್ನು ಸೇರಲಿದೆ.

ಈ ಸಂದರ್ಭ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜೇಗೌಡ, ಸಹಾಯಕ ಅಭಿಯಂತರ ನಾಗರಾಜು, ಗೇಟ್ ರೀಡರ್ ಗಿರೀಶ್ ಹಾಗೂ ಸಿಬ್ಬಂದಿ, ನೀರು ಬಳಕೆದಾರರ ಸಂಘದ ಪಾಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

Translate »