ಲೋಕಸಭಾ ಚುನಾವಣೆಗೆ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಸೂಚನೆ
ಹಾಸನ: ಜಿಲ್ಲೆಯಲ್ಲಿ ಯುವ ಮತ ದಾರರ ನೋಂದಣಿ ಪ್ರಕ್ರಿಯೆಯಲ್ಲಿ ಹಿನ್ನಡೆ ಯಾಗಿದೆ. ಕಾಲೇಜುಗಳಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅಧಿಕಾರಿ ಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಲೋಕಸಭಾ ಚುನಾ ವಣೆ ಶೀಘ್ರದಲ್ಲಿಯೇ ಘೋಷಣೆಯಾ ಗುವ ನಿರೀಕ್ಷೆ ಇದ್ದು, ಈಗಿನಿಂದಲೇ ಎಲ್ಲ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳ ಬೇಕಿದೆ. ಮತದಾರರ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಗಮನ ಹರಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಫೆ.18ರಿಂದ ಮಾ.8 ರವರೆಗೆ ಗ್ರಾಮ ಲೆಕ್ಕಿಗರು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿರುವ ವ್ಯತ್ಯಾಸಗಳ ಬಗ್ಗೆ ಗಮನಹರಿಸಲಿದ್ದಾರೆ. 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿ ಯಲ್ಲಿ ನೋಂದಣಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸಲಿದ್ದಾರೆ. ಜಿಲ್ಲಾ ಸ್ವೀಪ್ ಸಮಿತಿ ಸಹ ಇದರಲ್ಲಿ ಸಕ್ರಿಯ ವಾಗಿ ಪಾಲ್ಗೊಳ್ಳಬೇಕು. ಮತದಾರರ ಜಾಗೃತಿ ಕುರಿತ ಕರ ಪತ್ರಗಳನ್ನು ಮುದ್ರಿಸಿ ಮನೆ ಮನೆಗೆ ತಲುಪಿಸಬೇಕು ಎಂದರು.
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹೆಚ್ಚಿನ ನಿಗಾ ವಹಿಸ ಬೇಕು. ಅದಕ್ಕೂ ಮುನ್ನ ಎಲ್ಲಾ ಅಧಿಕಾರಿ ಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಹಾಗೂ ಪರೀಕ್ಷೆ ಕೂಡ ನಡೆಸಲಾಗು ವುದು. ಶೇ.50ರಷ್ಟು ಮತಯಂತ್ರ ಮತ್ತು ವಿ.ವಿ.ಪ್ಯಾಟ್‍ಗಳನ್ನು ಚುನಾವಣಾ ಪೂರ್ವ ತರಬೇತಿ ಹಾಗೂ ಸಾರ್ವಜನಿಕರ ಜಾಗೃತಿ ಚಟುವಟಿಕೆಗಳಿಗೆ ನೀಡಲಾಗುವುದು ಎಂದು ಸಿಂಧೂರಿ ಅವರು ವಿವರಿಸಿದರು.
ಶಾಲಾ ಕಾಲೇಜುಗಳ ಚುನಾವಣಾ ರಾಯಭಾರಿಗಳು ಸಹ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ನೈತಿಕ ಮತದಾನ ಹಾಗೂ ಕಡ್ಡಾಯ ಮತದಾನಕ್ಕೆ ಪ್ರೇರೇಪಿಸಬೇಕೆಂದು ಪದವಿ ಕಾಲೇಜುಗಳ ಪ್ರಾಂಶುಪಾಲರು, ಪದವಿ ಪೂರ್ವ ಕಾಲೇಜು ಹಾಗೂ ಸಾರ್ವ ಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇ ಶಕರಿಗೆ ಡಿಸಿ ನಿರ್ದೇಶನ ನೀಡಿದರು.
“ಸಿ” ವಿಲೇಜ್ ಆ್ಯಪ್ ಬಳಕೆ ಬಗ್ಗೆಯೂ ಅರಿವು ಮೂಡಿಸಿ ಸಂತೆಗಳಲ್ಲಿ ಮತದಾ ರರ ಜಾಗೃತಿ ಮಾಡಿ. ವಿಶೇಷಚೇತನ ಸ್ನೇಹಿ ಚುನಾವಣೆ ಚುನಾವಣಾ ಆಯೋಗದ ಆಶಯವಾಗಿದ್ದು, ಮತಗಟ್ಟೆಗಳಲ್ಲಿ ರ್ಯಾಂಪ್ ನಿರ್ಮಾಣ ಸೇರಿದಂತೆ ಅಗತ್ಯ ಸೌಕರ್ಯ ಗಳನ್ನು ಕಲ್ಪಿಸಬೇಕು. ಮತಗಟ್ಟೆಗಳಿಗೆ ತಹ ಶೀಲ್ದಾರ್‍ಗಳು ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಕಡೂರು ತಾಲೂಕು ಕೂಡ ಹಾಸನ ಲೋಕಸಭಾ ವ್ಯಾಪ್ತಿಗೆ ಸೇರುವುದರಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಡೂರು ತಾಲೂಕಿನಲ್ಲಿ ಈವರೆಗೆ ಆಗಿ ರುವ ಸಿದ್ಧತೆ ಹಾಗೂ ಮತದಾರರ ನೋಂದಣಿ ಪ್ರಕ್ರಿಯೆ ಬಗ್ಗೆ ಸಭೆಗೆ ವಿವರಿಸಿದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಪುಟ್ಟಸ್ವಾಮಿ, ಮತದಾರರ ಜಾಗೃತಿಗೆ ಈವರೆಗೆ ಕೈಗೊಂಡಿರುವ ಕ್ರಮ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ವೈಶಾಲಿ, ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್. ನಾಗರಾಜ್, ನಗರಸಭೆ ಆಯುಕ್ತ ಬಿ.ಎ. ಪರಮೇಶ್ ಹಾಗೂ ವಿವಿಧ ಇಲಾಖಾ ಧಿಕಾರಿಗಳು, ತಹಸೀಲ್ದಾರ್‍ರು ಸಭೆಯಲ್ಲಿ ಹಾಜರಿದ್ದರು.