ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ
ಹಾಸನ

ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ

June 27, 2018

ಹಾಸನ: ಜಿಲ್ಲೆಯಲ್ಲಿ ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಬಗ್ಗೆ ಪಟ್ಟಿ ತಯಾರಿಸುವುದರ ಜೊತೆಗೆ ಶೌಚಾ ಲಯಗಳಿಲ್ಲದ ಶಾಲೆಗಳ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ ನೀಡಿದರು.

ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಶಾಲೆಗಳ ಅವರಣದಲ್ಲಿಯೇ ವಿದ್ಯುತ್ ಲೈನ್ ಹಾದು ಹೋಗಿದ್ದು, ಇದರಿಂದ ಮಕ್ಕಳು ಆಟವಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಅನಾಹುತ ಸಂಭವಿಸದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ವಿದ್ಯುತ್ ತಂತಿ ಸ್ಥಳಾಂತರಿಸಲು ಕ್ರಮ ವಹಿಸು ವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮನೆಗೆ ಆಹಾರ ಕಳುಹಿಸಿ: ಮಾತೃ ಪೂರ್ಣ ಯೋಜನೆಯು ಮಹತ್ವದ ಯೋಜನೆಯಾಗಿದ್ದು, ಗರ್ಭಿಣಿಯರು ಮತ್ತು ಬಾಣಂತಿಯರು ಸಮರ್ಪಕವಾಗಿ ಸೌಲಭ್ಯ ಬಳಸಿಕೊಳ್ಳಲು ಅರಿವು ಮೂಡಿಸು ವಂತೆ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ ಜಿಪಂ ಅಧ್ಯಕ್ಷರು, ಅಂಗನವಾಡಿ ಕೇಂದ್ರಕ್ಕೆ ಆಹಾರ ಸ್ವೀಕರಿಸಲು ಅನಿವಾರ್ಯ ಕಾರಣಗಳಿಂದ ಬರದಿದ್ದ ಸಂದರ್ಭದಲ್ಲಿ ಫಲಾನುಭವಿಯ ಮನೆಗೆ ಆಹಾರ ಕಳುಹಿಸಲು ಕ್ರಮ ವಹಿ ಸುವಂತೆ ತಿಳಿಸಿದರು.
ಓದಿನ ಬಗ್ಗೆ ನಿಗಾ ಹಿಡಿ: 5ಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಅಂಗನವಾಡಿ ಕೇಂದ್ರದ ಮಕ್ಕಳನ್ನು ಪಕ್ಕದ ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರಿಸಿ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಡಿಯ ವಸತಿ ನಿಲಯ ಗಳಲ್ಲಿ ಮಕ್ಕಳನ್ನು ಶಿಸ್ತುಬದ್ಧವಾಗಿ ನೋಡಿ ಕೊಳ್ಳುವ ಜೊತೆಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ, ಮಕ್ಕಳ ಓದಿನ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಕ್ರಮ ವಹಿ ಸಲು ಸೂಚನೆ ನೀಡಿದರು.

ಡೆಂಗ್ಯೂ ಬಗ್ಗೆ ಅರಿವು ಮೂಡಿಸಿ: ಮಳೆಗಾಲದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದ ಅಧ್ಯಕ್ಷರು, ಸರ್ಕಾರಿ ಆಸ್ಪತ್ರೆಗೆ ಬರುವ ಸಾರ್ವಜನಿಕ ರನ್ನು ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಚೀಟಿ ನೀಡದಂತೆ ನಿಗಾ ವಹಿಸಿ ಎಂದು ಸಲಹೆ ನೀಡಿದರು.

ಕೃಷಿ ಹೊಂಡ ಬೇಲಿಗೆ ಕ್ರಮ:ಅಧಿಕ ಮಳೆಯಿಂದ ರೈತರು ನಿರ್ಮಿಸಿಕೊಂಡಿ ರುವ ಕೃಷಿಹೊಂಡಗಳಲ್ಲಿ ಹೆಚ್ಚು ನೀರು ಶೇಖರಣೆಯಾಗುತ್ತಿದ್ದು, ಯಾವುದೇ ಅವಘಡ ಸಂಭವಿಸದಂತೆ ಸುರಕ್ಷತೆಗಾಗಿ ಕೃಷಿ ಹೊಂಡದ ಸುತ್ತ ಬೇಲಿ ನಿರ್ಮಾಣಕ್ಕೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷರು ಸಲಹೆ ನೀಡಿದರು.

ಅಗತ್ಯ ಸೌಲಭ್ಯ ಕಲ್ಪಿಸಿ:ನರೇಗಾದಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ಖಾಸಗಿ ಶಾಲೆಗಳಲ್ಲಿ ಆರ್‍ಟಿಇ ಸರಿಯಾಗಿ ಅನುಷ್ಠಾನವಾಗುತ್ತಿದೆಯೇ ಎಂಬುದರ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನಿಗಾ ವಹಿಸುವಂತೆ ಸೂಚನೆ ನೀಡಿದ ಜಿಪಂ ಸಿಇಓ ಜಿ.ಜಗ ದೀಶ್, ನವೋದಯ ಶಾಲೆಗಳ ರೀತಿ ಮೊರಾರ್ಜಿ ದೇಸಾಯಿ ಶಾಲೆಗಳು ಮಾದರಿ ಶಾಲೆಗಳಾಗಬೇಕು. ಸರ್ಕಾರ ಉದ್ದೇಶಿತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ಸಾರ್ಥಕ ಪಡಿಸುವ ನಿಟ್ಟಿನಲ್ಲಿ ಕೆಲವು ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಕೊಂಡು, ದಾಖಲಾತಿ ಭರ್ತಿ ಯಾದ ನಂತರ ಖಾಸಗಿ ಶಾಲೆಗಳಿಗೆ ಮಕ್ಕಳು ದಾಖಲಾಗುವಂತೆ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಿ. ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನ ಪಡೆಯಲು ನಿಗಾ ವಹಿಸುವಂತೆ ಸೂಚಿಸಿದರಲ್ಲದೆ, ಅಪೌಷ್ಟಿಕತೆ ಯಿಂದ ಮಕ್ಕಳನ್ನು ಹೊರ ತರಲು ಅಂಗನವಾಡಿ ಕಾರ್ಯಕರ್ತೆಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ದಿನೇಶ್ ಮಾತನಾಡಿ, ಎಲ್ಲಾ ಸರ್ಕಾರಿ ಕಚೇರಿ ಗಳಲ್ಲಿ ಕನ್ನಡದಲ್ಲಿ ಪತ್ರ ವ್ಯವಹಾರ ನಡೆಸಲು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳಿದ್ದರು.

Translate »