ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಮಂಡ್ಯ

ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

March 23, 2019

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ತಾತ ಎಚ್.ಡಿ.ದೇವೇ ಗೌಡರು ಮತ್ತು ನಮ್ಮ ತಂದೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕಷ್ಟದ ಕಾಲದಲ್ಲಿ ಕೈಹಿಡಿದು ಅವರಿಗೆ ಶಕ್ತಿ ತುಂಬಿದ್ದಾರೆ. ಹಾಗಾಗಿ ಜಿಲ್ಲೆಯ ಜನತೆಯ ಋಣ ನಮ್ಮ ಕುಟುಂಬದ ಮೇಲಿದೆ. ಇದನ್ನು ತೀರಿಸುವ ಸಲುವಾಗಿ ನನಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಅವರು ತಾಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲೇಬೇಕೆಂಬ ಮಹದಾಸೆಯಿಂದ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟು ಅವರಿಗೆ ಅಪಾರ ಶಕ್ತಿ ತುಂಬಿದ್ದೀರಿ. ಅದೇ ರೀತಿ ನನಗೂ ಮಂಡ್ಯ ಜಿಲ್ಲೆಯ ಸಮಗ್ರ ಅಭಿ ವೃದ್ಧಿಗೆ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕೆಂದು ಮನವಿ ಮಾಡಿದರು.

ನಾನು ಈ ಬಾರಿ ಲೋಕಸಭೆಗೆ ಅಭ್ಯರ್ಥಿ ಯಾಗಬೇಕೆಂದು ಎಂದಿಗೂ ಬಯಸಿದ ವನಲ್ಲ. ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲೆಯ ಅಭಿವೃದ್ಧಿಯ ದೃಷ್ಠಿಯಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಬೇಕೆಂದು ಒತ್ತಡ ಹೇರಿದ್ದರು. ಇದನ್ನು ಹಲವು ಬಾರಿ ಕುಮಾರಸ್ವಾಮಿ ಅವರು ತಿರಸ್ಕರಿಸುತ್ತಾ ಬಂದರು. ಆದರೂ ಜಿಲ್ಲೆಯ ಪಕ್ಷದ ಹಿರಿಯ ಮುಖಂಡರು, ಶಾಸಕರು ನನ್ನನ್ನೇ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಮತ್ತೆ ಮತ್ತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಪಕ್ಷವು ಒಮ್ಮತದ ನಿರ್ಧಾರ ಕೈಗೊಂಡ ಕಾರಣ ನಿಮ್ಮೆಲ್ಲರ ಪ್ರೀತಿಗೆ ಮಣಿದು ಅಭ್ಯರ್ಥಿಯಾಗಿದ್ದೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ನಾರಾಯಣಗೌಡ ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿರು ವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಈ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಜಿಲ್ಲೆಯ ಜನರು ಪಕ್ಷಾತೀತವಾಗಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಯ ದೃಷ್ಠಿಯಿಂದಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಜಿಲ್ಲೆಯ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ನಿಖಿಲ್ ಕುಮಾರಸ್ವಾಮಿ ಅವ ರನ್ನು ಕನಿಷ್ಠ 5ಲಕ್ಷ ಮತಗಳ ಅಂತರ ದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ. ಮಂಜು ಪ್ರಾಸ್ತಾವಿಕ ನುಡಿಗಳನ್ನಾಡಿ, ತಾಲೂಕಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕೊಡುಗೆಯನ್ನು ಸ್ಮರಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟ ಸುಬ್ಬೇಗೌಡ, ಯುವ ಜೆಡಿಎಸ್ ತಾಲೂಕು ಅಧ್ಯಕ್ಷ ಹೇಮಂತ್‍ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಾಯಿತ್ರಿ ರೇವಣ್ಣ, ಸದಸ್ಯರಾದ ಬಿ.ಎಲ್.ದೇವರಾಜು, ಡಾ.ಜೆ.ಪ್ರೇಮಕುಮಾರಿ, ರಾಮದಾಸ್, ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು, ಸದಸ್ಯರಾದ ಎಂ.ಎನ್.ವಿಜಯ ಕುಮಾರ್, ಖಲೀಲ್‍ಬಾಬು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ, ಎಪಿಎಂಸಿ ಅಧ್ಯಕ್ಷ ನಾಗರಾಜೇಗೌಡ, ಮುಖಂಡರಾದ ಕೆ.ಶ್ರೀನಿವಾಸ್, ಕೆ.ಟಿ.ಗಂಗಾ ಧರ್, ಕೆ.ಎನ್.ಕೃಷ್ಣ, ಬಸ್‍ಕೃಷ್ಣೇಗೌಡ, ಎಸ್.ಎಲ್.ರಮೇಶ್, ಟಿಎಪಿಸಿಎಂಎಸ್ ನಿರ್ದೇಶಕ ಹೆಚ್.ಟಿ.ಲೋಕೇಶ್, ರಾಜ್ಯ ಯುವ ಜೆಡಿಎಸ್ ಘಟಕದ ಪ್ರಧಾನ ಕಾರ್ಯ ದರ್ಶಿ ಕೆ.ಬಿ.ನಾಗೇಶ್, ಎಸ್.ಆರ್.ದಿನೇಶ್, ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಶ್ರೀಧರ್ ಸಿರಿವಂತ, ಜಿಲ್ಲಾ ಜೆಡಿಎಸ್ ಎಸ್.ಟಿ. ಘಟಕದ ಅಧ್ಯಕ್ಷ ಪೂವನಹಳ್ಳಿ ರೇವಣ್ಣ, ಪುರಸಭಾ ಸದಸ್ಯ ಕೆ.ಎಸ್.ಸಂತೋಷ್ ಕುಮಾರ್, ಹೆಚ್.ಆರ್.ಲೋಕೇಶ್, ಟೌನ್ ಯುವ ಜೆಡಿಎಸ್ ಅಧ್ಯಕ್ಷ ಕೆ.ಸಚಿನ್‍ಕೃಷ್ಣ, ತಾಲೂಕು ರೈತ ದಳ ಅಧ್ಯಕ್ಷ ಅನಿಲ್, ತಾಲೂಕು ಹೆಚ್.ಡಿ.ಕುಮಾರಸ್ವಾಮಿ ಅಭಿ ಮಾನಿಗಳ ಬಳಗದ ಅಧ್ಯಕ್ಷ ಕೆ.ಆರ್. ಲೋಕೇಶ್‍ಗೌಡ, ಗ್ರಾ.ಪಂ. ಅಧ್ಯಕ್ಷ ಹರೀಶ್, ಚಿದಂಬರ್, ಕರ್ತೇನಹಳ್ಳಿ ಸುರೇಶ್ ಮತ್ತಿ ತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

300ಕೆ.ಜಿ ಸೇಬಿನ ಹಾರ: ಕಾರ್ಯ ಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ನಾರಾಯಣಗೌಡ ಮತ್ತು ಯುವ ಜನತಾದಳದ ಅಧ್ಯಕ್ಷ ಕೆ.ಆರ್.ಹೇಮಂತ್‍ಕುಮಾರ್ ನೇತೃತ್ವದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾ ಯಿತು. ನಂತರ ಬೈಕ್ ರ್ಯಾಲಿ ಮೂಲಕ ಅನುವಿನಕಟ್ಟೆ, ಸಿಂಧುಘಟ್ಟ, ಹರಳಹಳ್ಳಿ ವರೆಗೆ ಭರ್ಜರಿ ಸ್ವಾಗತ ಕೋರಲಾಯಿತು. ಹರಳಹಳ್ಳಿ ಗ್ರಾಮದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡ ನಿಖಿಲ್ ಅವರಿಗೆ ಅಭಿಮಾನಿಗಳು ಪುಷ್ಪ ಮಳೆ ಸುರಿಸುವ ಮೂಲಕ ಭವ್ಯ ಸ್ವಾಗತ ಕೋರಿದರು. ನೀತಿ ಮಂಗಲ ಸರ್ಕಲ್‍ನಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ಹೆಚ್.ಟಿ. ಲೋಕೇಶ್ ಮತ್ತು ಗ್ರಾ.ಪಂ.ಅಧ್ಯಕ್ಷ ಹರೀಶ್ ನೇತೃತ್ವದಲ್ಲಿ ಸುಮಾರು 300 ಕೆ.ಜಿ ತೂಕದ ಸೇಬಿನ ಹಾರವನ್ನು ಹಾಕುವ ಮೂಲಕ ನಿಖಿಲ್ ಕುಮಾರ ಸ್ವಾಮಿಗೆ ಅದ್ಧೂರಿ ಸ್ವಾಗತ ಕೋರಿದರು.

Translate »