ಹಾಸನ ಮೊಮ್ಮಗನಿಗೆ ಬಿಟ್ಟು ಬೆಂಗಳೂರು   ಉತ್ತರದತ್ತ ಹೆಚ್.ಡಿ.ದೇವೇಗೌಡರ ನಡೆ…
ಮೈಸೂರು

ಹಾಸನ ಮೊಮ್ಮಗನಿಗೆ ಬಿಟ್ಟು ಬೆಂಗಳೂರು ಉತ್ತರದತ್ತ ಹೆಚ್.ಡಿ.ದೇವೇಗೌಡರ ನಡೆ…

January 3, 2019

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್‍ಗೆ ಆ ಕ್ಷೇತ್ರ ಬಿಟ್ಟು ಕೊಟ್ಟು, ತಾವು ಬೆಂಗಳೂರು ಉತ್ತರ ಕ್ಷೇತ್ರದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಗೌಡರು ಬೆಂಗಳೂರು ಕಡೆ ಬರುತ್ತಿರುವ ಮಾಹಿತಿ ಅರಿಯುತ್ತಿದ್ದಂತೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಬಲಿಗ ಎಚ್.ಎಂ. ರೇವಣ್ಣ ಇದೇ ಕ್ಷೇತ್ರದಿಂದ ಸ್ಪರ್ಧಿಸಲು ತಮಗೇ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಿಧಾನ ಪರಿಷತ್ ಸದಸ್ಯ ಅವಧಿ ಪೂರ್ಣಗೊಳ್ಳುತ್ತಿದೆ. ಮೈತ್ರಿ ಸರ್ಕಾರ ದಲ್ಲಿ ಮಂತ್ರಿಗಿರಿಯೂ ದೊರೆಯಲಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇ ಕೆಂದು ಒತ್ತಾಯಿಸಿದ್ದಾರೆ. ತಮ್ಮ ಸಮುದಾಯಕ್ಕೆ ಸಂಬಂಧ ಪಟ್ಟಂತಹ ಪುಸ್ತಕದ ಬಗ್ಗೆ ಮಾಹಿತಿ ನೀಡುವ ನೆಪದಲ್ಲಿ ಚುನಾವಣಾ ಸ್ಪರ್ಧೆ ಕುರಿತೇ ಹೆಚ್ಚು ವಿವರ ನೀಡಿದರು. ಇದರಿಂದ ಗೌಡರು ಮತ್ತು ಸಿದ್ದರಾಮಯ್ಯ ನಡುವಿನ ಮುಸು ಕಿನ ಗುದ್ದಾಟ ಲೋಕಸಭಾ ಕ್ಷೇತ್ರಕ್ಕೂ ಕಾಲಿಟ್ಟಿದೆ. ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ಸಂಬಂಧ ಮೈತ್ರಿ ಪಕ್ಷಗಳ ನಡುವೆ ಮಾತುಕತೆಯೇ ಆರಂಭವಾಗಿಲ್ಲ. ಆದರೆ ಗೌಡರು ಮಾತ್ರ 28ರಲ್ಲಿ 12 ಕ್ಷೇತ್ರ ಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷ ಯಾರನ್ನೇ ಕಣಕ್ಕಿಳಿಸಿದರೂ ಗೆಲುವು ನಿಶ್ಚಿತ, ಅಲ್ಲಿ ತಮ್ಮ ಸ್ಪರ್ಧೆಯಿಂದ ಹೆಚ್ಚಿನ ದೇನೂ ಸಾಧನೆ ಮಾಡಿದಂತೆ ಆಗುವುದಿಲ್ಲ ಎಂಬ ತರ್ಕದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಬಿಟ್ಟು ಕೊಡಬೇಕೆಂಬ ಕ್ಷೇತ್ರಗಳ ಪಟ್ಟಿಯಲ್ಲಿ ಬೆಂಗ ಳೂರು ಉತ್ತರ, ಮೈಸೂರು, ತುಮಕೂರು ಸಹ ಸೇರಿವೆ. ಈ ಚುನಾವಣೆಯಲ್ಲಿ ಕನಿಷ್ಠ 6 ರಿಂದ 8 ಸ್ಥಾನಗಳನ್ನು ಪಕ್ಷ ಗೆಲ್ಲಲೇಬೇಕು ಎಂಬ ಉದ್ದೇಶದಿಂದ ಈಗಿನಿಂದಲೇ ರಣತಂತ್ರ ರೂಪಿಸುತ್ತಿದ್ದಾರೆ.

ಜೆಡಿಎಸ್ ಸ್ಪರ್ಧಿಸಲು ಆಸಕ್ತಿ ತೋರುತ್ತಿರುವ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಈಗಿನಿಂದಲೇ ತಗಾದೆ ತೆಗೆಯಲು ಆರಂಭಿಸಿದ್ದಾರೆ. ಇತ್ತೀಚಿನ ಸಚಿವ ಸಂಪುಟ ಪುನರ್ರಚನೆ ಸಂದರ್ಭ ದಲ್ಲಿ ಮಂತ್ರಿಯಾಗಲು ನಾನು ಬಯಸಿದ್ದೆ, ಮಂತ್ರಿಗಿರಿ ಸಿಗಲಿಲ್ಲ. ಮಾಗಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಪಕ್ಷದ ವತಿಯಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ದೆ, ಕಳೆದ ಚುನಾವಣೆ ಯಲ್ಲಿ ಪಕ್ಷದ ವರಿಷ್ಠರ ಸೂಚನೆಯಂತೆ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಅಲ್ಲಿ ಗೆಲ್ಲಲಾಗದಿದ್ದರೂ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಕಾರಣನಾದೆ. ಆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದಲ್ಲಿ ಮುಖ್ಯ ಮಂತ್ರಿ ಆಗಿದ್ದಾರೆ. ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ ನಾಗಿ ದುಡಿಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.

Translate »