ಹಾಸನ: ನಗರದ ಜಿಲ್ಲಾ ಕ್ರೀಡಾಂ ಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾ ಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾ ಶ್ರಯದಲ್ಲಿ ಏರ್ಪಡಿಸಲಾಗಿದ್ದ 2018-19ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಕ್ರೀಡಾ ಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯ ಕ್ರಮದಲ್ಲಿ ಬಲೂನುಗಳನ್ನು ಗಾಳಿಯಲ್ಲಿ ಹಾರಿ ಬಿಡುವ ಮೂಲಕ ಲೋಕೋಪ ಯೋಗಿ ಸಚಿವ ಹೆಚ್.ಡಿ. ರೇವಣ್ಣ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ನೌಕರರು ನಾವೆಲ್ಲಾ ಒಂದೇ ಎಂಬ ಮನೋಭಾವನೆಯನ್ನಿಟ್ಟುಕೊಂಡು ಕ್ರೀಡಾ ಕೂಟದಲ್ಲಿ ಭಾಗವಹಿಸಿ ತಾಲ್ಲೂಕುಗಳಿಂದ ಆಗಮಿಸಿರುವ ಎಲ್ಲಾ ನೌಕರರ ಜೊತೆ ಸ್ನೇಹದಿಂದ ವರ್ತಿಸಿ ಆಟಗಳನ್ನು ಹೆಚ್ಚು ಉತ್ಸಾಹದಿಂದ ಆಡಿ ಎಂದು ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಎ.ಎನ್. ಪ್ರಕಾಶ್‍ಗೌಡ ಮಾತನಾಡಿ, ದಿನದ 24 ಗಂಟೆಗಳ ಕಾಲ ಕೆಲಸದ ಒತ್ತಡದಲ್ಲೇ ಇರುವ ಸರಕಾರಿ ನೌಕರರಿಗೆ ಇಂತಹ ಕ್ರೀಡೆಯು ಮನೋಲ್ಲಾಸ ನೀಡಲಿದೆ ಎಂದರು. ಗ್ರಾಮೀಣ ಭಾಗದ ಜನರು ವಿವಿಧ ಇಲಾಖೆಯ ಸರಕಾರಿ ನೌಕರರ ಕಚೇರಿಗೆ ನಿಮ್ಮ ಬಳಿ ಬಂದಾಗ ಅವರ ಸಮಸ್ಯೆ ಯನ್ನು ಆಸಕ್ತಿ ವಹಿಸಿ, ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು. ಗಂಭೀರ ವಾದ ಸಮಸ್ಯೆ ಎದುರಾದಾಗ ಬಗೆಹರಿಸಲು ನಮ್ಮ ಪೊಲೀಸ್ ಇಲಾಖೆ ಸದಾ ಸಿದ್ಧ ವಾಗಿರುತ್ತದೆ. ಎಲ್ಲರೂ ಶಾಂತ ರೀತಿ ಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಶುಭ ಕೋರಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜು ಮಾತನಾಡಿ, ಬಾಲ್ಯ ಜೀವನ ದಲ್ಲಿ ವಿವಿಧ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಸಿಗುತಿತ್ತು. ನಂತರ ಕೆಲಸಕ್ಕೆ ಹೋದ ಮೇಲೆ ಕುಟುಂಬದ ಜವಾಬ್ದಾರಿ ಹೆಚ್ಚಾಗಿ ಆಟೋಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. ಕ್ರೀಡೆ ಎಂಬುದು ಮನುಷ್ಯನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಬೇಕು. ಅದಕ್ಕಿಂತ ಮುಖ್ಯವಾಗಿ ಕ್ರೀಡೆಯಲ್ಲಿ ಭಾಗವಹಿ ಸುವುದು ಮುಖ್ಯ ಎಂದು ಕಿವಿಮಾತು ಹೇಳಿದರು. ಯಾವುದೇ ಕ್ರೀಡೆ ಆಗಲಿ ಭಾಗ ವಹಿಸಿದ ಎಲ್ಲಾ ಕ್ರೀಡಾಪಟುಗಳು ಗೆಲುವು ಸಾಧಿಸಲು ಸಾಧ್ಯವಿಲ್ಲ.
ಯಾರು ಸೋಲು ಅನುಭವಿಸುತ್ತಾರೆ ಅವರು ಇನ್ನು ಹೆಚ್ಚಿನ ಅಭ್ಯಾಸವನ್ನು ಮಾಡಿ ಮುಂದಿನ ಕ್ರೀಡೆಯಲ್ಲಿ ಗೆಲುವು ಸಾಧಿಸಲು ಮುಂದಾ ಗಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾರ್ಯಾಧ್ಯಕ್ಷ ನಾಯಕರಹಳ್ಳಿ ಮಂಜೇ ಗೌಡ ಮಾತನಾಡಿ, ಸರ್ಕಾರಿ ನೌಕರರು, ನಾವೆಲ್ಲ ಒಂದೇ ಎಂಬ ಮನೋಭಾವನೆ ಯನ್ನಿಟ್ಟುಕೊಂಡು ಕ್ರೀಡಾ ಕೂಟದಲ್ಲಿ ಭಾಗವಹಿಸಿ ತಾಲೂಕುಗಳಿಂದ ಆಗಮಿಸಿರುವ ಎಲ್ಲಾ ನೌಕರರ ಜೊತೆ ಸ್ನೇಹದಿಂದ ವರ್ತಿಸಿ ಆಟಗಳನ್ನು ಹೆಚ್ಚು ಉತ್ಸಾಹದಿಂದ ಆಡಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಟ್ಟ ಸ್ವಾಮಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಕಾಶ್ ಎಂ. ಸರಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್, ಪ್ರದಾನ ಕಾರ್ಯದರ್ಶಿ ಸಿ.ಎಸ್. ಶಿವಸ್ವಾಮಿ, ಗೌರವಾಧ್ಯಕ್ಷ ಬಿ.ಕೆ. ರುದ್ರಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ದೇವೇಗೌಡ, ಕೃಷ್ಣೇಗೌಡ, ಮನೋಹರ್, ವಾಲ್ಮೀಕಿ ಜನಾಂಗ ನೌಕರರ ಸಂಘದ ಅಧ್ಯಕ್ಷ ಜಿ.ಓ. ಮಹಾಂ ತಪ್ಪ ಸೇರಿದಂತೆ ಎಲ್ಲಾ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿ ಗಳು ಮತ್ತಿತರರು ಕ್ರೀಡಾಕೂಟದಲ್ಲಿ ಹಾಜರಿದ್ದರು.