ನಾಳೆ ಜಿಲ್ಲೆಯಲ್ಲಿ ಹೆಚ್‍ಡಿಡಿ, ಸಿದ್ದರಾಮಯ್ಯ ಜಂಟಿ ಪ್ರಚಾರ
ಹಾಸನ

ನಾಳೆ ಜಿಲ್ಲೆಯಲ್ಲಿ ಹೆಚ್‍ಡಿಡಿ, ಸಿದ್ದರಾಮಯ್ಯ ಜಂಟಿ ಪ್ರಚಾರ

April 10, 2019

ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಏ.11ರಂದು ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಚಾರ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಪಟೇಲ್ ಶಿವಣ್ಣ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರೊಂದಿಗೆ ಜಿಲ್ಲಾ ಉಸ್ತು ವಾರಿ ಸಚಿವÀ ಹೆಚ್.ಡಿ.ರೇವಣ್ಣ, ಹಾಗೂ ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳು, ಎರಡು ಪಕ್ಷದ ಮುಖಂಡರು ಆಗಮಿಸುತ್ತಿದ್ದಾರೆ ಎಂದು ವಿವರಿಸಿದರು.

ಬೆಳಿಗ್ಗೆ 11ಗಂಟೆಗೆ ಕಡೂರು ವಿಧಾನಸಭಾ ಕ್ಷೇತ್ರದಿಂದ ಪ್ರಚಾರ ಪ್ರಾರಂಭಿಸಲಾಗು ವುದು. ಮಧ್ಯಾಹ್ನ 12ಕ್ಕೆ ಬಾಣಾವರ, 2ಕ್ಕೆ ಗಂಡಸಿ ಹ್ಯಾಂಡ್ ಪೋಸ್ಟ್, ಸಂಜೆ 4ಕ್ಕೆ ಅರಕಲಗೂಡು, 6ಕ್ಕೆ ಹಳ್ಳಿ ಮೈಸೂರು ಕಡೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಹೆಚ್ಚು ಸಂಖ್ಯೆ ಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಓಬಿಸಿ ಅಧ್ಯಕ್ಷ ಸುರೇಶ್, ಹೊಳೆನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರಸಭೆ ಸದಸ್ಯ ಧರ್ಮೇಗೌಡ, ರಾಜ್ಯ ಹಿಂದೂಳಿದ ವರ್ಗಗಳ ಚಂದ್ರಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.

Translate »