ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ
ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ

October 27, 2018

ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲದಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪ್ರವಾಸ

ಮಂಡ್ಯ: ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿದರು.

ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ನಡೆದ ಜೆಡಿಎಸ್- ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಳವಳ್ಳಿ, ಮದ್ದೂರು ಹಾಗೂ ನಾಗಮಂಗಲದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಸಮ್ಮಿಶ್ರ ಸರ್ಕಾರ ಸುಭದ್ರ, ಅನುಮಾನ ಬೇಡ: ಕುಮಾರಸ್ವಾಮಿ

ಮಂಡ್ಯ:ರಾಜ್ಯದಲ್ಲಿ ಅಧಿಕಾರದಲ್ಲಿರು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಈ ವಿಷಯ ದಲ್ಲಿ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ನಗರದ ಸಿಲ್ವರ್ ಜ್ಯೂಬಲಿ ಪಾರ್ಕ್‍ನಲಿ ಶುಕ್ರವಾರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಹಣ ಕೊಟ್ಟು ಶಾಸಕರ ಖರೀದಿಸುವ ಮೂಲಕ ನನ್ನ ಸರ್ಕಾರವನ್ನು ಬೀಳಿಸೋದಕ್ಕೆ ಆಗೋಲ್ಲ. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನನ್ನ ಮೇಲಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಾವುದೇ ಅನುಮಾನ ಬೇಡ, ಕೆಲ ಮಾಧ್ಯಮಗಳು ಸರ್ಕಾರ ಈಗ ಬಿದ್ದೊಗುತ್ತೆ, ಆಗ ಬಿದ್ದೋಗುತ್ತೆ, ದೀಪಾವಳಿವರೆಗಷ್ಟೇ ಸರ್ಕಾರದ ಆಯಸ್ಸು ಅಂತೆಲ್ಲಾ ಅಪಪ್ರಚಾರ ಮಾಡುತ್ತಿವೆ, ಇಂತಹ ಸುಳ್ಳು ಸುದ್ದಿಗೆಲ್ಲಾ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಮಳವಳ್ಳಿ: ‘ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಕ್ಕೆ, ಮಂಡ್ಯ ಬಜೆಟ್ ಎಂದು ಟೀಕೆ ಮಾಡಿದ ಬಿಜೆಪಿ ಅವರು ಇಂದು ಯಾವ ಮುಖ ಒತ್ತುಕೊಂಡು ಜಿಲ್ಲೆಯಲ್ಲಿ ಮತಯಾಚಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ನಡೆದ ಲೋಕಸಭೆಯ ಉಪಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಮಂಡ್ಯ ಜನತೆಯ ಸಂಕಷ್ಟಕ್ಕಾಗಿ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಆದ್ಯತೆ ಮೇರೆಗೆ ಅನುದಾನ ನೀಡಲಾಗಿದೆ. ಆದರೆ, ಇದನ್ನು ಮಂಡ್ಯ ಬಜೆಟ್ ಎಂದು ದೂರಿದ ಯಡಿಯೂರಪ್ಪ ಅವರು ಈಗ ಮಂಡ್ಯ ವನ್ನು ಗುತ್ತಿಗೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸುತ್ತೇನೆ ಎಂದು ಬೊಬ್ಬೆ ಹೊಡೆಯು ತ್ತಿದ್ದಾರೆ ಎಂದು ಟೀಕಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಸಾರ್ವಜನಿಕರು ನೀಡಿದ ಅಹವಾಲುಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ನಿಮ್ಮ ಅಹವಾಲುಗಳನ್ನು ಸ್ವೀಕರಿಸಿ ದ್ದೇನೆ. ಚುನಾವಣೆ ನೀತಿಸಂಹಿತೆ ಮುಕ್ತಾಯ ಗೊಂಡ ಬಳಿಕ, ಅವುಗಳನ್ನು ಪರಿಹರಿ ಸಲು ಕ್ರಮಕೈಗೊಳ್ಳುತ್ತೇನೆ ಎಂದರು.

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣವನ್ನು ನಗರ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ 15 ಕೋಟಿ ರೂ. ಬಿಡುಗಡೆ ಗೊಳಿಸಿದ್ದೇನೆ ಎಂದು ಹೆಚ್.ಡಿ.ಕುಮಾರ ಸ್ವಾಮಿ ಹೇಳಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಮಂಡ್ಯ ಲೋಕಸಭಾ ಉಪ ಚುನಾ ವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ದರು. 1610ರಲ್ಲಿ ದಸರಾ ಎಂಬ ಪರಂಪರೆ ಆರಂಭವಾಗಿದ್ದು, ಶ್ರೀರಂಗಪಟ್ಟಣದಲ್ಲೇ ಅಂತಹ ಘತ ವೈಭವ ವನ್ನು ನೀತಿ ಸಂಹಿತೆ ಇದ್ದರೂ ಸಹ ಮರು ಕಳಿಸುವಂತೆ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವ ದಲ್ಲಿ ಅದ್ಧೂರಿಯಾಗಿ ನಡೆದಿದೆ. ಮುಂದಿನ ವರ್ಷದ ದಸರಾ ಆಚರಣೆಯನ್ನು ಮೈಸೂರು ದಸರಾ ಮಾದರಿಯಲ್ಲೇ ಬಹಳ ವಿಜೃಂಭಣೆ ಯಿಂದ ಆಚರಣೆ ಮಾಡಲಾಗುವುದು ಎಂದರು.

ವೇದಿಕೆಯಲ್ಲಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿತಮ್ಮಣ್ಣ, ಶಾಸಕರಾದ ಎ.ಎಸ್.ರವೀಂದ್ರ ಶ್ರೀಕಂಠಯ್ಯ, ಎಂ. ಶ್ರೀನಿವಾಸ್, ಸುರೇಶ್‍ಗೌಡ, ಡಾ.ಕೆ. ಅನ್ನದಾನಿ, ಅಭ್ಯರ್ಥಿ ಎಲ್.ಆರ್.ಶಿವರಾಮೇ ಗೌಡ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಕೆ.ಟಿ.ಶ್ರೀಕಂಠಯ್ಯ, ವಿಧಾನಪರಿ ಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಜಫ್ರುಲ್ಲಾ ಖಾನ್, ಜಿಪಂ ಅಧ್ಯಕ್ಷೆ ನಾಗರತ್ನ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್, ಕಾಂಗ್ರೆಸ್‍ನ ತುಮಕೂರು ಸಂಸದ ಮುದ್ದಹನುಮೇ ಗೌಡ, ಮಾಜಿ ಸಚಿವ ಎಂ.ಎಸ್.ಆತ್ಮಾ ನಂದ, ಅಮರಾವತಿ ಚಂದ್ರಶೇಖರ್, ಜಿ.ಪಂ. ಸದಸ್ಯ ವಿಜಯಾನಂದ, ಮುಖಂಡ ಡಾ.ಕೃಷ್ಣ, ಅಂಬರೀಶ್ ಅಭಿ ಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್, ಬಿಎಸ್‍ಪಿ ಮುಖಂಡ ರಾಜು, ಸಿದ್ದಪ್ಪ, ದಸಂಸದ ಎಂ.ಬಿ. ಶ್ರೀನಿವಾಸ್ ಮತ್ತಿತರರು ಇದ್ದರು.

ರೇಷ್ಮೆ ಬೆಳೆಗೆ 50ರೂ. ಬೆಂಬಲ ಬೆಲೆ: ಸಿಎಂ

ಮದ್ದೂರು: ‘ರೇಷ್ಮೆ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರವು ಬದ್ಧವಾಗಿದ್ದು, ಈಗಾಗಲೇ ರೇಷ್ಮೆಗೂಡಿಗೆ ಕೆಜಿವೊಂದಕ್ಕೆ 50ರೂ ಬೆಂಬಲ ಬೆಲೆ ಘೋಷಿಸಿದ್ದು, ಚುನಾವಣೆ ಬಳಿಕ ಇದು ಜಾರಿಗೆ ಬರಲಿದೆ’ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಸಂಜಯ ಚಿತ್ರಮಂದಿರ ಆವರಣದಲ್ಲಿ ಲೋಕಸಭಾ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾವು ಬೆಳೆಗಾರರು ಅತೀ ಹೆಚ್ಚು ಬೆಳೆಯಿಂದಾಗಿ ಮಾವನ್ನು ಬೀದಿಗೆ ಸುರಿಯುವ ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಕೆ.ಜಿಯೊಂದಕ್ಕೆ 20ರೂ. ಬೆಂಬಲ ಬೆಲೆ ಘೋಷಿಸಲಾಗಿತು. ಪ್ರಸ್ತುತ ರೇಷ್ಮೆ ಬೆಳೆ ಬೆಲೆ ಇಳಿಕೆಯಾಗಿದ್ದು, ಸರ್ಕಾರ ಬೆಂಬಲ ಬೆಲೆ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಶ್ರೀರಂಗಪಟ್ಟಣ, ಮದ್ದೂರು ಹಾಗೂ ಮಂಡ್ಯಕ್ಕೆ ವಿಶೇಷ ಅನುದಾನ ನೀಡಲಾಗಿದೆ. ಇದನ್ನು ಬಿಜೆಪಿ ನಾಯಕರು, ಇದು ರಾಜ್ಯ ಸರ್ಕಾರದ ಬಜೆಟ್ ಅಲ್ಲ. ಇದು ಮಂಡ್ಯ ಬಜೆಟ್ ಎಂದು ಲೇವಡಿ ಮಾಡಿದರು. ಅದೇ ನಾಯಕರು ಮಂಡ್ಯಕ್ಕೆ ಬಂದು ಯಾವ ನೈತಿಕತೆ ಇಟ್ಟುಕೊಂಡು ಬಿಜೆಪಿ ಅಭ್ಯರ್ಥಿ ಪರ ಮತ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Translate »