ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ ಸಮನ್ವಯ ಸಮಿತಿ ಸಭೆ
ಹಾಸನ

ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ ಸಮನ್ವಯ ಸಮಿತಿ ಸಭೆ

February 7, 2019

ಅಪೌಷ್ಠಿಕತೆ ನಿಯಂತ್ರಿಸಲು ಸಿಇಓ ಸೂಚನೆ
ಹಾಸನ: ಜಿಲ್ಲೆಯಲ್ಲಿ ಅಪೌಷ್ಟಿಕತೆ ಸಂಪೂರ್ಣ ನಿಯಂತ್ರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಎಲ್ಲಾ ರೀತಿಯ ಕ್ರಮ ವಹಿಸ ಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಸಿ. ಪುಟ್ಟಸ್ವಾಮಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಗುರುವಾರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ ಸಮ ನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಧಾರಣ ಪೌಷ್ಟಿಕತೆ ಯಿರುವ 2,279 ಮಕ್ಕಳಿದ್ದು, ತಾಲೂಕು ವಾರುಗಳಲ್ಲಿ ತೂಕ ಕಡಿಮೆ ಇರುವ ಮಕ್ಕಳು ಹಾಗೂ ಸಾಧಾರಣಾ ಅಪೌಷ್ಟಿ ಕತೆಯಿರುವ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲು ತ್ತಿರುವ ಮಕ್ಕಳನ್ನು ಗುರುತಿಸಿ ಉತ್ತಮ ವಾದ ಪೌಷ್ಟಿಕ ಆಹಾರವನ್ನು ಒದಗಿಸ ಬೇಕು. ಒಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳನ್ನು ಪರೀಕ್ಷಿಸಿ ತಪಾಸಣೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಹೊಳೆನರಸೀಪುರು ಹಾಗೂ ಬೇಲೂರು ತಾಲೂಕುಗಳಲ್ಲಿ ಹೆಚ್ಚಿನ ಸುಧಾರಣೆಗಳು ನಡೆಯಬೇಕಿದೆ. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸಬೇಕು. ಸರ್ಕಾರದ ಆದೇಶವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಕಡಿಮೆ ಯಾಗಿದ್ದು, ಇದು ಸಂಪೂರ್ಣ ನಿರ್ಬಂಧ ಗೊಳ್ಳಬೇಕು. ಸಾರ್ವಜನಿಕರಲ್ಲಿಯೂ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಇದೇ ರೀತಿ ಗ್ರಾಮೀಣ ಪ್ರದೇಶಗಳ ಜನ ರಿಗೆ ಶೌಚಾಲಯದ ಬಳಕೆ ಬಗ್ಗೆ ಅರಿವು ಮೂಡಿಸಬೇಕು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ರೋಗ ನಿರ್ವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ.ರಾಜಗೋಪಾಲ್, ಆರ್‍ಸಿಹೆಚ್‍ಒ ಡಾ.ಜನಾರ್ಧನ್, ಡಿಎಸ್‍ಓ ಡಾ.ಹಿರ ಣಯ್ಯ, ಕಿರಿಯ ಆರೊಗ್ಯ ಸಹಾಯಕ ಸತೀಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Translate »