ಪತ್ರಕರ್ತರಿಗೆ ಆರೋಗ್ಯ ತಪಾಸಣಾ ಶಿಬಿರ
ಮೈಸೂರು

ಪತ್ರಕರ್ತರಿಗೆ ಆರೋಗ್ಯ ತಪಾಸಣಾ ಶಿಬಿರ

December 29, 2019

ಮೈಸೂರು,ಡಿ.28(ಪಿಎಂ)- ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಕರ್ತರು ಹಾಗೂ ಅವರ ಕುಟುಂಬ ದವರಿಗೆ ಹಮ್ಮಿಕೊಂಡಿದ್ದ ಉಚಿತ ಆಯು ರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಎಲ್.ನಾಗೇಂದ್ರ ಉದ್ಘಾಟಿಸಿದರು.

ಆಯುರ್ವೇದ ಸಂಶೋಧನಾ ಕೇಂದ್ರ, ಜಿಲ್ಲಾ ಪತ್ರಕರ್ತರ ಸಂಘದ ಜಂಟಿ ಆಶ್ರಯ ದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನ ಹಾಗೂ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾ ಸಣಾ ಶಿಬಿರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಎಲ್.ನಾಗೇಂದ್ರ, ಪತ್ರಕರ್ತರು ಒತ್ತಡದಲ್ಲಿ ಕಾರ್ಯನಿರ್ವಹಿಸುವುದು ಅನಿವಾರ್ಯ. ಹೀಗಾಗಿ ಅನೇಕ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿರುವುದು ಶ್ಲಾಘ ನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಕರ್ತರು ಆರೋಗ್ಯವಂತರಾಗಿದ್ದರೆ ಸಮಾಜ ಆರೋಗ್ಯವಾಗಿರಲು ಪೂರಕ ವಾತಾವರಣ ಇರುತ್ತದೆ. ಹೀಗಾಗಿ ಇಂತಹ ಕಾರ್ಯಕ್ರಮಗಳು ಆಗಾಗ್ಗೆ ನಡೆ ಯುವಂತಾಗಬೇಕು ಎಂದರು.

ಅತಿಥಿಯಾಗಿ ಪಾಲ್ಗೊಂಡಿದ್ದ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಮಾತನಾಡಿ, ಬಿಡುವಿಲ್ಲದೇ ದುಡಿಯುವ ಪತ್ರಕರ್ತರಿಗೆ ಆರೋಗ್ಯ ಸಮಸ್ಯೆಗಳು ಸಾಮಾನ್ಯವಾಗಿ ಎದುರಾಗುತ್ತಿರುತ್ತವೆ. ಈ ನಿಟ್ಟಿನಲ್ಲಿ ಉಚಿತ ಆರೋಗ್ಯ ತಪಾಸಣೆ ಹಮ್ಮಿ ಕೊಂಡಿರುವುದು ಸ್ವಾಗತಾರ್ಹ. ಪತ್ರಕರ್ತ ಬಂಧುಗಳು ಇದನ್ನು ಸದುಪಯೋಗ ಪಡಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾನಿಧ್ಯ ವಹಿಸಿದ್ದ ಶ್ರೀಗಣಪತಿ ಸಚ್ಚಿದಾ ನಂದ ಆಶ್ರಮದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಉಚಿತ ಆರೋಗ್ಯ ಸೇವೆ ನೀಡುವಂತಹ ಕಾರ್ಯಕ್ರಮಗಳು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಯವರಿಗೆ ಸಂತಸ ಉಂಟು ಮಾಡುತ್ತದೆ. ನಮ್ಮ ಬದುಕಿನಲ್ಲಿ ನಗದು ಇರುವುದ ಕ್ಕಿಂತ ನಗು ಇರುವುದು ಮುಖ್ಯ. ಅದಕ್ಕೆ ಆರೋಗ್ಯ ಇದ್ದರೆ ಆ ನಗು ಮೂಡುತ್ತದೆ. ಆರೋಗ್ಯ ಕಾಯ್ದುಕೊಂಡು ನಾವೆಲ್ಲಾ ನಗುತಾ ಇರಬೇಕು ಎಂದು ನುಡಿದರು.

ಇಂದಿನ ತಪಾಸಣೆಯಲ್ಲಿ 3 ಲಕ್ಷ ರೂ. ಮೌಲ್ಯದ ಔಷಧಗಳಿಗೆ ಏರ್ಪಾಡು ಮಾಡಿ ರುವುದು ನಿಜಕ್ಕೂ ಸಂತಸದ ವಿಚಾರ. ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಲಿ. ಆ ಮೂಲಕ ಸಮಾಜ ಆರೋಗ್ಯ ವಂತ ಸಮಾಜವಾಗಲಿ ಎಂದು ಆರೈಸಿದರು.

ರಕ್ತದೊತ್ತಡ, ಮಧುಮೇಹ, ಮೂಳೆ ಸಾಂದ್ರತೆ, ಕಣ್ಣಿನ ತಪಾಸಣೆ, ಇಸಿಜಿ, ಇಕೋ ಹಾಗೂ ಸಾಮಾನ್ಯ ಪರೀಕ್ಷೆ ನಡೆ ಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಜೆಎಸ್‍ಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಜೆಎಸ್‍ಎಸ್ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ನಾರಾಯಣ ಹೃದಯಾಲಯ, ಅನ್ನ ಪೂರ್ಣ ಕಣ್ಣಿನ ಆಸ್ಪತ್ರೆ, ಶಾರದಾವಿಲಾಸ ಫಾರ್ಮಸಿ ಕಾಲೇಜು, ಅಟ್ರಿಮೆಡ್ ಫಾರ್ಮಾ ಸ್ಯೂಟಿಕಲ್ಸ್ ಹಾಗೂ ಸಾಗರ್ ಫಾರ್ಮಾ ಸ್ಯೂಟಿಕಲ್ಸ್ ಸಹಯೋಗದೊಂದಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ವೈದ್ಯ ವಾರ್ತಾ ಪತ್ರಿಕೆ ಸಂಪಾದಕ ಡಾ. ಎಂಜಿಆರ್ ಅರಸ್, ವೈದ್ಯ ತರಂಗಿಣಿ ಪತ್ರಿಕೆ ಸಂಪಾದಕ ಡಾ.ಎಂ.ಜಿ.ಕೃಷ್ಣಮೂರ್ತಿ, ಆಯುಷ್ ನಿರ್ದೇಶನಾಲಯದ ಸಹಾಯಕ ಆಡಳಿತಾಧಿಕಾರಿ ಎಂ.ಬಸವರಾಜಯ್ಯ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸುಬ್ರಹ್ಮಣ್ಯ, ಪ್ರಧಾನ ಕಾರ್ಯ ದರ್ಶಿ ಕೆ.ಜೆ.ಲೋಕೇಶ್ ಬಾಬು, ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ ಮತ್ತಿತರರಿದ್ದರು.

Translate »