ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ
ಮೈಸೂರು

ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ

August 10, 2021
  • ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಶಾಲೆಗಳಲ್ಲೇ ಪರೀಕ್ಷೆ
  • ರೋಗ ಲಕ್ಷಣವುಳ್ಳ ಮಕ್ಕಳಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆ
  • ಮೈಸೂರಲ್ಲಿ ಕೊರೊನಾ ನಿರ್ವಹಣೆ ಪ್ರಗತಿ ಪರಿಶೀಲನೆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟ

ಮೈಸೂರು, ಆ. 9(ಆರ್‍ಕೆ)- ರಾಜ್ಯದ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳ ಶಾಲೆಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿರ್ವ ಹಣೆ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿ ಗಾರರಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯನ್ನು ತಡೆಗಟ್ಟಲು ಸರ್ವ ರೀತಿಯಲ್ಲಿ ಜಿಲ್ಲಾಡ ಳಿತ ಸಜ್ಜುಗೊಂಡಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ (Pಊಅ) ಗಳ ವ್ಯಾಪ್ತಿಗೆ ಬರುವ ಗ್ರಾಮಗಳ ಶಾಲೆ ಗಳಲ್ಲಿನ 6ರಿಂದ 16 ವರ್ಷದ ಮಕ್ಕಳ ಆರೋಗ್ಯ ತಪಾಸಣೆ ನಡೆಸಲು ನಿರ್ಧ ರಿಸಲಾಗಿದ್ದು, ಅದಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ, ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕರಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದ ಮಕ್ಕಳನ್ನು ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಮತ್ತು ಆರೈಕೆ ಮಾಡಿಸಬೇಕು, ಅದಕ್ಕೆ ಬೇಕಿರುವ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ಮಕ್ಕಳನ್ನು ಕೊರೊನಾದಿಂದ ರಕ್ಷಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವು ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪೌಷ್ಟಿಕ ಆಹಾರ, ಔಷಧಿ: ಆರೋಗ್ಯ ತಪಾಸಣೆ ಮಾಡಿದಾಗ ಅಪೌಷ್ಟಿಕತೆ ಇರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಪೌಷ್ಟಿಕಾಂಶ ನೀಡುವ ಔಷಧಿಗಳನ್ನು ಅಂಗನವಾಡಿ ಕೇಂದ್ರಗಳ ಮೂಲಕ ಪೂರೈಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಒಂದು ವಾರ ಬಿಟ್ಟು ಮತ್ತೆ ತಪಾಸಣೆ ಮಾಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳನ್ನು ಮಕ್ಕಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ವಾರದಿಂದೀಚೆಗೆ ಶೇ. 1.19 ರಷ್ಟಕ್ಕಿಳಿದಿರುವ ಕೊರೊನಾ ಪ್ರಕರಣಗಳನ್ನು ಶೂನ್ಯ ಪ್ರಮಾಣಕ್ಕಿಳಿಸಲು ಯತ್ನಿಸುತ್ತಿದ್ದೇವೆ. ಕಳೆದೊಂದು ವಾರದಲ್ಲಿ 1.26 ಲಕ್ಷ ಲಸಿಕೆ ಹಾಕಲಾಗಿದೆ. ಕೇರಳ-ಮಹಾರಾಷ್ಟ್ರದಲ್ಲಿ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಮೈಸೂರು ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿ ಗಡಿ ಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ನುಡಿದರು.

ಆರ್‍ಟಿಪಿಸಿಆರ್ ಟೆಸ್ಟ್: ಆರೋಗ್ಯ ಸಿಬ್ಬಂದಿ, 3 ಪಾಳಿಯಲ್ಲಿ ಕೆಲಸ ಮಾಡಲು ಸೂಚಿಸಲಾಗಿದ್ದು, ಆರ್‍ಟಿಪಿಸಿಆರ್ ಟೆಸ್ಟ್ ಹೆಚ್ಚಿಸಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಕೊರೊನಾ ಸೋಂಕು ಹರಡದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ಲಸಿಕೆ ಕಡ್ಡಾಯ: ಚೆಕ್‍ಪೋಸ್ಟ್‍ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಗಡಿಯಿಂದ 10 ಕಿ.ಮೀ. ವ್ಯಾಪ್ತಿಯ ಎಲ್ಲಾ ಗ್ರಾಮಗಳ ನಿವಾಸಿಗಳಿಗೆ ಲಸಿಕೆಯನ್ನು ಆದ್ಯತೆ ಮೇಲೆ ನೀಡಬೇಕು, ದಿನ ಬಿಟ್ಟು ದಿನ ಹಿರಿಯ ಅಧಿಕಾರಿಗಳು ಗ್ರಾಮೀಣ ಪ್ರದೇಶಕ್ಕೆ ತೆರಳಿ ಕೋವಿಡ್ ಸಂಬಂಧ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

ಲಸಿಕೆ ಪೂರೈಕೆ: ತಿಂಗಳಿಗೆ 63 ರಿಂದ 65 ಲಕ್ಷ ಲಸಿಕೆ ನೀಡುತ್ತಿದ್ದು, ಅದನ್ನು 1 ಕೋಟಿ ಮಂದಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮುಂದಿನ ತಿಂಗಳು ಇನ್ನೂ ಒಂದೂವರೆ ಕೋಟಿಯಷ್ಟು ಲಸಿಕೆ ನೀಡುವುದಾಗಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ. ಮುಂದೆ ಪ್ರತೀ ದಿನ ಹೆಚ್ಚು ಮಂದಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Translate »