ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ
ಮೈಸೂರು

ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

May 31, 2020

ಮೈಸೂರು, ಮೇ 30(ಪಿಎಂ)- ಮುಂದಿನ ಮೂರ್ನಾಲ್ಕು ದಿನ ಗಳಲ್ಲಿ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 31ರಂದು ಮೈಸೂರು ಸೇರಿದಂತೆ ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂತೆಯೇ ಜೂ.1ರಂದು ಚಿಕ್ಕ ಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ಜೂ.2ರಂದು ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜೂ.3ರಂದು ಕರಾವಳಿ ಪ್ರದೇಶದಲ್ಲಿ ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Translate »