ಜೂ.10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ
ಮೈಸೂರು

ಜೂ.10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ

June 7, 2019

ಬೆಂಗಳೂರು: ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ಶುಕ್ರವಾರ ಮುಂಜಾನೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಜೂನ್ 8, 9 ಹಾಗೂ 10ರಂದು ಕೂಡ ಭಾರಿ ವರ್ಷಧಾರೆ ಮುಂದುವರಿಯಲಿದ್ದು, ದಕ್ಷಿಣ ಒಳ ನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಉಳಿದಂತೆ, ಜೂನ್ 9ರಂದು ಮಲೆನಾಡು ಪ್ರದೇಶಗಳಾದ ಚಿಕ್ಕಮಗ ಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳು, ಜೂನ್ 10ರಂದು ಚಿಕ್ಕಮಗಳೂರು ಜಿಲ್ಲೆಯ ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Translate »