ರಾಜ್ಯದಲ್ಲಿ ಭಾರೀ ಮಳೆ, ಚಂಡಮಾರುತ ಎಚ್ಚರಿಕೆ
ಮೈಸೂರು

ರಾಜ್ಯದಲ್ಲಿ ಭಾರೀ ಮಳೆ, ಚಂಡಮಾರುತ ಎಚ್ಚರಿಕೆ

June 5, 2018

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರಾಜ್ಯದÀ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಚಂಡಮಾರುತದ ಎಚ್ಚರಿಕೆ ನೀಡಿದೆ. ‘ಕರ್ನಾಟಕ ಒಳನಾಡು, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ತಮಿಳುನಾಡು, ಕೇಂದ್ರ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸಗಢ ಮತ್ತು ವಿದರ್ಭಗಳ ವಿವಿಧ ಭಾಗಗಳಲ್ಲಿ ಬಿರುಗಾಳಿ, ಸಿಡಿಲು ಸಹಿತ ಭಾರಿ ಮಳೆಯಾಗ ಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮಣ ಪುರ, ನಾಗಾ ಲ್ಯಾಂಡ್, ಮೇಘಾಲಯ, ಮಿಜೋರಾಂ, ತ್ರಿಪುರಾ, ರಾಯಲಸೀಮೆ, ಕೇರಳಗಳಲ್ಲಿಯೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ವರದಿ ಎಚ್ಚರಿಕೆ ನೀಡಿದೆ. ಅರೇಬಿಯನ್ ಸಮುದ್ರ, ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದ ಮೇಲ್ಭಾಗ ವಿವಿಧೆಡೆ ಮೋಡ ಆವರಿಸಿರುವ ಉಪಗ್ರಹ ಚಿತ್ರವನ್ನು ಹವಾ ಮಾನ ಇಲಾಖೆ ಬಿಡುಗಡೆ ಮಾಡಿದೆ.

ಉತ್ತರ ಮತ್ತು ಕೇಂದ್ರ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಬಿಸಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಈ ಮುಂಚೆ ತಿಳಿಸಿತ್ತು.ಹವಾಮಾನ ಇಲಾಖೆಯ ವರದಿ ಪ್ರಕಾರ ದೇಶದ ಕೇಂದ್ರ ಭಾಗದಲ್ಲಿ ಈ ಬಾರಿ ಸಾಮಾನ್ಯ ಮಳೆಯಾಗಲಿದೆ. ಆದರೆ, ದಕ್ಷಿಣದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ಮತ್ತು ಪುದುಚೆರಿಗಳಲ್ಲಿ ವಾಡಿಕೆಗಿಂತ ಮಳೆಯಾಗಲಿದೆ ಎಂದು ಅದು ತಿಳಿಸಿದೆ.

ಈಶಾನ್ಯ ಭಾಗದಲ್ಲಿಯೂ ಸಾಮಾನ್ಯ ಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ದೀರ್ಘಾವಧಿ ಸರಾಸರಿಯಲ್ಲಿ (ಎಲ್‍ಪಿಎ) ದೇಶದಲ್ಲಿ ಜುಲೈ ತಿಂಗಳಿನಲ್ಲಿ ಶೇ. 101ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ ತಿಂಗಳಿನಲ್ಲಿ ಶೇ. 9ರ ವ್ಯತ್ಯಾಸದಲ್ಲಿ ಶೇ. 94ರಷ್ಟು ಎಲ್‍ಪಿಎ ನಿರೀಕ್ಷಿಸಲಾಗಿದೆ. ಉಪ ಖಂಡ, ಹಿಂದೂ

ಮಹಾಸಾಗರ ಪ್ರದೇಶದಲ್ಲಿ ಆಸ್ಟ್ರೇಲಿಯಾದವರೆಗಿನ ಹವಾಮಾನ ಸ್ಥಿತಿಯ ಕುರಿತು ಐಎಂಡಿಯ ಉಪಗ್ರಹ ಚಿತ್ರ ಎಲ್‍ಪಿಎಯ ಶೇ. 90-96ರವರೆಗಿನ ಮಳೆಯನ್ನು ಸಾಮಾನ್ಯಕ್ಕಿಂತ ಕಡಿಮೆ ಎಂದು ಪರಿಗಣ ಸಲಾಗುತ್ತದೆ. ಶೇ. 96-104 ರವರೆಗಿನ ಎಲ್‍ಪಿಎಯನ್ನು ಸಾಮಾನ್ಯ ಎಂದು ಪರಿಗಣ ಸಲಾಗುತ್ತದೆ. ಶೇ. 90ಕ್ಕಿಂತ ಕಡಿಮೆ ಮಳೆಯಾದರೆ ಅದನ್ನು ಎಲ್‍ಪಿಎಯಲ್ಲಿ ಮಳೆಯ ಕೊರತೆ ಎಂದು, ಶೇ. 104-110ರ ನಡುವಣ ಮಳೆ ಪ್ರಮಾಣವನ್ನು ಸಾಮಾನ್ಯಕ್ಕಿಂತ ಅಧಿಕ ಹಾಗೂ ಶೇ. 110ಕ್ಕಿಂತ ಹೆಚ್ಚಿನ ಮಳೆ ಪ್ರಮಾಣವನ್ನು ಅತ್ಯಧಿಕ ಮಳೆ ಎಂದು ಪರಿಗಣ ಸಲಾಗುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜನವರಿಯಿಂದ ಇಲ್ಲಿವರೆಗೆ ಕೊಡಗಿನಲ್ಲಿ ಉತ್ತಮ ಮಳೆಯಾಗಿದ್ದು, ಸುಮಾರು 119 ಮಿ.ಮೀ ಮಳೆಯಾಗಿದೆ. ಜನವರಿಯಿಂದ ಮಾರ್ಚ್ ತನಕ ಮಳೆ ಬೀಳದಿದ್ದರೂ ನಂತರ ಸುರಿದ ಮಳೆ ಕೊಡಗಿನ ಜನರಲ್ಲಿ ಆಶಾ ಭಾವನೆ ಹುಟ್ಟಿಸಿದೆ.

ಜೂ. 6ರಿಂದ ಮುಂಗಾರು ಮತ್ತಷ್ಟು ಚುರುಕು
ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಮಳೆ ಬಂದಿದ್ದೇ ಆದರೆ ಈ ಬಾರಿ ಬಹು ಬೇಗ ಕೆಆರ್‍ಎಸ್ ಜಲಾಶಯ ಭರ್ತಿಯಾಗುವುದಂತೂ ಖಚಿತ.

ಜನವರಿಯಿಂದ ಇಲ್ಲಿವರೆಗೆ ಸುರಿದ ಮಳೆಯ ವಿವರವನ್ನು ನೋಡಿದ್ದೇ ಆದರೆ ಈ ಬಾರಿ 433.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 314.54 ಮಿ.ಮೀ ಮಳೆಯಾಗಿದ್ದನ್ನು ಸ್ಮರಿಸಬಹುದಾಗಿದೆ. ಕಳೆದ ವರ್ಷ ಮೇ- ಜೂನ್‍ನಲ್ಲಿ ಮಳೆ ಬಿದ್ದಿತ್ತಾದರೂ ಆ ನಂತರ ಮಳೆ ಸುರಿದಿರಲಿಲ್ಲ. ಇದರಿಂದ ಅಂತರ್ಜಲ ಹೆಚ್ಚಳವಾಗಿರಲಿಲ್ಲ. ಆದರೆ ಹಿಂಗಾರು ಮಳೆ ಡಿಸೆಂಬರ್ ತನಕವೂ ಬಂದಿದ್ದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಂಡುಬಂದಿರಲಿಲ್ಲ. ಒಂದು ವೇಳೆ ಈ ಬಾರಿಯೂ ಉತ್ತಮ ಮಳೆಯಾದರೆ ಕೊಡಗಿನ ಜನ ಮಾತ್ರವಲ್ಲದೆ ಕಾವೇರಿ ಜಲಾನಯನ ಪ್ರದೇಶದ ಎಲ್ಲ ರೈತರಿಗೂ ಅನುಕೂಲವಾಗಲಿದೆ. ಈಗಾಗಲೇ ಮಳೆ ಸುರಿದ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾದಂತೆ ಕಂಡು ಬಂದಿದೆ. ಇಲ್ಲಿನ ಇತರೆ ತೊರೆ, ನದಿಗಳಲ್ಲೂ ನೀರು ಕಾಣ ಸುತ್ತಿದೆ.

ಇತ್ತ ಕೆಆರ್ ಎಸ್ ಜಲಾಶಯದಲ್ಲಿಯೂ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಡೆಡ್ ಸ್ಟೋರೇಜ್ ದಾಟಿದ್ದ ಜಲಾಶಯದಲ್ಲಿ ನೀರಿನ ಮಟ್ಟದಲ್ಲಿ ಸಾಕಷ್ಟು ಏರಿಕೆಯಾಗಿದೆ. 124.80 ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಮೇ 20ರ ವೇಳೆಗೆ 69.14 ಅಡಿಗೆ ಕುಸಿದಿತ್ತು. ಆದರೆ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿದಿದ್ದರಿಂದಾಗಿ ಸದ್ಯ 74 ಅಡಿಯಷ್ಟು ತಲುಪಿದೆ. ಸುಮಾರು ಐದು ಅಡಿಯಷ್ಟು ಏರಿಕೆ ಕಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಮೇ ತಿಂಗಳಲ್ಲಿ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದ ಕೆಲ ಅನಾಹುತವಾದರೂ ನದಿಗೆ ನೀರು ಮಾತ್ರ ಹೆಚ್ಚಿನ ಪ್ರಮಾಣದಲ್ಲಿಯೇ ಹರಿದು ಬಂದಿದೆ. ಮಳೆ ಇದೇ ರೀತಿಯಲ್ಲಿ ಸುರಿದು, ಕೊಡಗಿನಲ್ಲಿ ವಾಡಿಕೆಯ ಮಳೆಯಾಗಿ ಕೆಆರ್‍ಎಸ್ ಜಲಾಶಯ ಭರ್ತಿಯಾದರೆ ಎಲ್ಲರೂ ನೆಮ್ಮದಿಯುಸಿರು ಬಿಡಬಹುದಾಗಿದೆ.

Translate »