ಕೊಡಗಿನಾದ್ಯಂತ ಮುಂದುವರೆದ ಮಳೆಯ ಅಬ್ಬರ: ಭಾಗಮಂಡಲ ತ್ರಿವೇಣ ಸಂಗಮ ಜಲಾವೃತ
ಕೊಡಗು

ಕೊಡಗಿನಾದ್ಯಂತ ಮುಂದುವರೆದ ಮಳೆಯ ಅಬ್ಬರ: ಭಾಗಮಂಡಲ ತ್ರಿವೇಣ ಸಂಗಮ ಜಲಾವೃತ

June 11, 2018
  • ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:  ಕೊಡಗು ಜಿಲ್ಲೆಯಾದ್ಯಂತ ಗಾಳಿ, ಮಳೆಯ ಆರ್ಭಟ ಮುಂದುವರೆದಿದೆ. ಭಾಗಮಂಡಲದ ತ್ರಿವೇಣ ಸಂಗಮದಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನದಿ ನೀರು ರಸ್ತೆಯನ್ನು ಆವರಿಸಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ತೀವ್ರತೆ ಜಿಲ್ಲೆಯಾದ್ಯಂತ ಹೆÉಚ್ಚಿದ್ದು, ಕಾವೇರಿಯ ಉಗಮಸ್ಥಾನ ವಾದ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಯಾಗು ತ್ತಿದೆ. ಭಾಗಮಂಡಲ ಮತ್ತು ಅಯ್ಯಂಗೇರಿ ರಸ್ತೆಗಳ ಮೇಲೆ ನದಿ ನೀರು ಹರಿಯಲಾರಂಭಿಸಿದ್ದು, ಕಾವೇರಿಯ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.

ಶನಿವಾರ ಬೆಳಗ್ಗಿನಿಂದ ಭಾನುವಾರ ಬೆಳಗ್ಗಿನ ಅವಧಿಯವರೆಗೆ ತಲಕಾವೇರಿ ಯಲ್ಲಿ ಸುಮಾರು 7 ಇಂಚು ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ 6.50 ಇಂಚು ಮಳೆಯಾಗಿದ್ದು, ಕ್ಷೇತ್ರ ವ್ಯಾಪ್ತಿಯ ಚೆಟ್ಟಿಮಾನಿ, ಚೇರಂಗಾಲ, ಕೋರಂಗಾಲ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಭಾಗಮಂಡಲದ ತ್ರಿವೇಣ ಸಂಗಮ ಜಲಾವೃತವಾಗಿದ್ದು, ಕೇಶಮುಂಡನ ಮತ್ತು ಬಟ್ಟೆ ಬದಲಿಸುವ ಕಟ್ಟಡ ನದಿ ನೀರಿನಿಂದ ಆವೃತವಾಗಿದೆ.

ಕಾವೇರಿ ನದಿ ಹರಿದು ಹೋಗುವ ನಾಪೋಕ್ಲು, ಮೂರ್ನಾಡು, ಸಿದ್ದಾಪುರ, ಕುಶಾಲನಗರ ವ್ಯಾಪ್ತಿಯಲ್ಲೂ ಭಾರೀ ಮಳೆ ಯಾಗುತ್ತಿದ್ದು, ಮೂರ್ನಾಡು ಬಲ ಮುರಿಯ ಹಳೆಯ ಸೇತುವೆ ಮುಳುಗಡೆ ಯಾಗಿದೆ. ಸಿದ್ದಾಪುರದ ಕರಡಿಗೋಡು, ನೆಲ್ಯಹುದಿಕೇರಿಯ ಎಡದಂಡೆ ಮತ್ತು ಬಲದಂಡೆಯಲ್ಲಿರುವ ನಿವಾಸಿಗಳು ಪ್ರವಾ ಹದ ಭೀತಿಗೆ ಸಿಲುಕಿದ್ದಾರೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯು ತ್ತಿರುವ ಮಳೆಯ ಹಿನ್ನೆಲೆಯಲ್ಲಿ ಅಂಗನ ವಾಡಿಗಳು ಸೇರಿದಂತೆ ಶಾಲಾ ಕಾಲೇಜು ಗಳಿಗೆ ಜೂ.11 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಭಾಗಮಂಡಲಕ್ಕೆ ಡಿಸಿ ಭೇಟಿ: ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ತಹಶೀಲ್ದಾರ್ ಹಾಗೂ ಅಧಿಕಾರಿಗಳ ತಂಡದೊಂದಿಗೆ ಭಾಗಮಂಡ ಲಕ್ಕೆ ಭೇಟಿ ನೀಡಿ ಜಲಾವೃತಗೊಂಡಿರುವ ಪ್ರದೇಶಗಳನ್ನು ಪರಿಶೀಲಿಸಿದರು. ಪ್ರವಾಹ ದಿಂದ ಕಷ್ಟ, ನಷ್ಟಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಧಿಕಾರಿ ಸೂಚನೆ ನೀಡಿದರು.
ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಜಿಲ್ಲಾಧಿಕಾರಿ ವಿಶೇಷ ಪೂಜೆ ಸಲ್ಲಿಸಿದರು. ಭಾಗಮಂಡಲದಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ದಳ ಸನ್ನದ್ಧ ವಾಗಿದೆ. ಪ್ರವಾಹ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬೋಟ್ ವ್ಯವಸ್ಥೆಯನ್ನು ಮಾಡಲಾಗಿದೆ.

ಬರೆಗಳ ಕುಸಿತ: ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಸೇರಿದಂತೆ ಸೋಮವಾರಪೆಟೆ, ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಳೆಯಿಂದ ಮರ ಹಾಗೂ ಬರೆಗಳು ಧರೆಗುರುಳಿರುವ ಘಟನೆ ನಡೆದಿದೆ. ಮಡಿಕೇರಿ ನಗರದಲ್ಲಿ ಒಳ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಹದಗೆಟ್ಟು ನೀರು ನಿಂತಿರುವುದರಿಂದ ವಾಹನಗಳ ಸಂಚಾರ ದುಸ್ತರವೆನಿಸಿದೆ.
ದಕ್ಷಿಣ ಕೊಡಗಿನ ವೀರಾಜಪೇಟೆ, ಗೋಣ ಕೊಪ್ಪಲು, ಪೊನ್ನಂಪೇಟೆ, ಬಾಳೆಲೆ, ಕಾನೂರು ವಿಭಾಗಗಳಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ಲಕ್ಷ್ಮಣ ತೀರ್ಥ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ನದಿ ಪಾತ್ರದ ಗದ್ದೆ ಬಯ ಲುಗಳು ನೀರಿನಿಂದ ಆವೃತವಾಗಿದೆ.

ಮಡಿಕೇರಿ ನಗರದಲ್ಲಿ ಮಳೆಯೊಂದಿಗೆ ಚಳಿಯೂ ಇದ್ದು, ಈ ಸುಂದರ ವಾತಾ ವರಣವನ್ನು ಸವಿಯಲು ಆಗಮಿಸಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಆದರೆ ವಿದ್ಯುತ್ ಕಂಬಗಳು ಧರೆಗುರುಳಿರು ವುದರಿಂದ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳು ಕಾರ್ಗತ್ತಲಿನಲ್ಲಿದ್ದು, ಕೆಲಸ ಕಾರ್ಯಗಳು, ಹೊಟೇಲ್ ವ್ಯವಹಾರ ಗಳಿಗೂ ಅಡಚಣೆ ಉಂಟಾಗಿದೆ.

Translate »