೪ ದಿನ ಮೈಸೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮಂಡ್ಯ, ಚಾ.ನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ
ಮೈಸೂರು

೪ ದಿನ ಮೈಸೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮಂಡ್ಯ, ಚಾ.ನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

May 19, 2022

ಮೈಸೂರು, ಮೇ ೧೮(ಆರ್‌ಕೆಬಿ)- ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮೇ ೧೯ರಿಂದ ೨೨ರವರೆಗೆ ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಮೈಸೂರು ಜಿಲ್ಲೆಯಲ್ಲಿ ಮೇ ೧೯ರಂದು ೪೦ ಮಿ.ಮೀ., ೨೦ರಂದು ೩೫ ಮಿ.ಮೀ., ೨೧ರಂದು ೨೨ ಮಿ.ಮೀ. ಹಾಗೂ ೨೨ರಂದು ೧೦ ಮಿ.ಮೀ. ಮಳೆಯಾಗುವ ಸಂಭವವಿದೆ. ಕೊಡಗು ಜಿಲ್ಲೆಯಲ್ಲಿಯೂ ಈ ನಾಲ್ಕು ದಿನಗಳ ಅವಧಿಯಲ್ಲಿ ಕ್ರಮವಾಗಿ ೩೫ ಮಿ.ಮೀ., ೩೫ ಮಿ.ಮೀ., ೨೫ ಮಿ.ಮೀ ಹಾಗೂ ೨೦ ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಯಲ್ಲಿ ಈ ನಾಲ್ಕು ದಿನಗಳ ಅವಧಿಯಲ್ಲಿ ಕ್ರಮವಾಗಿ ೩೩ ಮಿ.ಮೀ., ೧೯ ಮಿ.ಮೀ., ೧೨ ಮಿ.ಮೀ. ೮ ಮಿ.ಮೀ. ಮಳೆಯಾಗಲಿದ್ದು, ಚಾಮರಾಜನಗರ ಜಿಲ್ಲೆಯಲ್ಲಿಯೂ ಕ್ರಮವಾಗಿ ೨೦ ಮಿ.ಮೀ., ೧೮ ಮಿ.ಮೀ., ೧೧ ಮಿ.ಮೀ ಹಾಗೂ ೧೦ ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಈ ಅವಧಿಯಲ್ಲಿ ಉಷ್ಣಾಂಶದಲ್ಲಿಯೂ ಸ್ವಲ್ಪ ಏರುಪೇರಾಗಲಿದ್ದು, ಮೈಸೂರು ಜಿಲ್ಲೆಯಲ್ಲಿ ಗರಿಷ್ಠ ೨೪ರಿಂದ ೨೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೧೭ರಿಂದ ೧೯ ಡಿಗ್ರಿ ಸೆಲ್ಸಿಯಸ್, ಕೊಡಗು ಜಿಲ್ಲೆಯಲ್ಲಿ ಗರಿಷ್ಠ ೨೬ರಿಂದ ೨೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೧೭ರಿಂದ ೧೮ ಡಿಗ್ರಿ ಸೆಲ್ಸಿಯಸ್, ಮಂಡ್ಯ ಜಿಲ್ಲೆಯಲ್ಲಿ ಗರಿಷ್ಠ ೨೪ರಿಂದ ೨೭ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೧೯-೨೦ ಡಿಗ್ರಿ ಸೆಲ್ಸಿಯಸ್ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಗರಿಷ್ಠ ೩೦-೩೧ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೧೮-೧೯ ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಮೈಸೂರಿನ ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಧೀರ್ಘಾವಧಿ ಹವಾಮಾನ ಮನ್ಸೂಚನೆ ಪ್ರಕಾರ ಮೇ ೨೦ರಿಂದ ೨೬ರವೆರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Translate »