ಮಂಗಳೂರು, ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಮೈಸೂರು

ಮಂಗಳೂರು, ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

August 28, 2018

ಮಂಗಳೂರು: ಈಗಾಗಲೇ ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಎಚ್ಚರಿಕೆ ನೀಡಿದೆ.

ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಎರಡು ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮತ್ತೊಮ್ಮೆ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.

Translate »