ಮೈಸೂರು: ಇತ್ತೀಚೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ಪ ಡಿಸಿದ್ದ ಏರ್ಶೋ ವೇಳೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸುಮಾರು 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾದ ಸಂಬಂಧ ವಾಹನಗಳ ಮಾಲೀಕರ ಅನುಕೂಲಕ್ಕೋಸ್ಕರ ವಾಹನ ನೋಂದಣಿ ಮತ್ತು ಚಾಲನಾ ಪತ್ರಗಳ ವಿವರಗಳನ್ನು ಪಡೆದು, ಮುಂದಿನ ಕ್ರಮಕ್ಕಾಗಿ ಸಾರಿಗೆ ಇಲಾಖೆ ವತಿಯಿಂದ ಯಲಹಂಕದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ. ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080-29729908, 29729909, ಮೊ. 9449864050 ಮೂಲಕ ಸಂಬಂಧಪಟ್ಟವರು ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಸಹಾಯ ಕೇಂದ್ರವು ಫೆಬ್ರವರಿ 24ರಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
