ಹುನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಹೇಮಾವತಿ ಸೋಮೇಶ್
ಹಾಸನ

ಹುನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಹೇಮಾವತಿ ಸೋಮೇಶ್

December 31, 2018

ಬೇಲೂರು, ಡಿ.30- ಹುನುಗನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾಡಗೋಡು ಗ್ರಾಮದ ಹೇಮಾವತಿ ಸೋಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕಿನ ಅರೇಹಳ್ಳಿ ಹೋಬಳಿ ಹುನುಗನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸವಿತಾ ಅವರ ರಾಜೀ ನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಡಗೋಡು ಗ್ರಾಮದ ಹೇಮಾವತಿ ಸೋಮೇಶ್ ಒಬ್ಬರೇ ನಾಮಪತ್ರ ಸಲ್ಲಿಸಿ ದ್ದರಿಂದ, ಅವರು ಉಪಾಧ್ಯಕ್ಷರಾಗಿ ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ತಾಪಂ ಇಒ ರವಿಕುಮಾರ್ ಘೋಷಿಸಿದರು.

ಈ ವೇಳೆ ಮಾತನಾಡಿದ ಹೇಮಾವತಿ ಸೋಮೇಶ್, ನಮ್ಮ ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲೂ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಹಾಗೂ ನಾನು ಉಪಾಧ್ಯಕ್ಷೆಯಾಗಲು ಸಹಕರಿ ಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯ ಅಶ್ವಥ್, ಮಾಜಿ ಉಪಾಧ್ಯಕ್ಷೆ ಪದ್ಮಾಕ್ಷಿ ಸತ್ಯನಾರಾ ಯಣ್, ಗ್ರಾಪಂ ಅಧ್ಯಕ್ಷ ಸುರೇಶ್, ಸದಸ್ಯ ರಾದ ವನಜಾಕ್ಷಿ, ಸವಿತಾ, ಪ್ರದೀಪ್, ಯೋಗೇಶ್, ಪ್ರತಿಮಾ, ಪಿಡಿಒ ಕಾಳಮ್ಮ, ಸೇರಿದಂತೆ ಇನ್ನಿತರರಿದ್ದರು.

Translate »