ಗಡಿಗಳು, ಏರ್‍ಪೆÇೀರ್ಟ್‍ನಲ್ಲಿ ಹೈ ಅಲರ್ಟ್: ಮುಖ್ಯಮಂತ್ರಿ
News

ಗಡಿಗಳು, ಏರ್‍ಪೆÇೀರ್ಟ್‍ನಲ್ಲಿ ಹೈ ಅಲರ್ಟ್: ಮುಖ್ಯಮಂತ್ರಿ

November 29, 2021

ಬೆಂಗಳೂರು,ನ.28-ಕೇರಳದಿಂದ ಬಂದವರಿಂದ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗು ತ್ತಿದ್ದು, ಕ್ಲಸ್ಟರ್ ಆಗಿರುವ ಕಡೆಯಲ್ಲಿ ಕೇರಳದಿಂದ ಪ್ಯಾರಾಮೆಡಿ ಕಲ್ ಸಿಬ್ಬಂದಿಗಳು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು, ಕೇರಳ ಗಡಿಭಾಗಗಳಲ್ಲಿ ಸಂಪೂರ್ಣ ವಾಗಿ ಎಚ್ಚರಿಕೆ ವಹಿಸಿ, ಕಟ್ಟುನಿಟ್ಟಿನ ಕ್ರಮ ತೆಗೆದು ಕೊಳ್ಳಬೇಕು. ಕಡ್ಡಾಯ ವಾಗಿ ಕೊರೊನಾ ಟೆಸ್ಟ್ ಮಾಡಿ ನೆಗೆಟಿವ್ ಇದ್ದರೆ ಮಾತ್ರ ಬಿಡಬೇಕು. ಲಸಿಕೆಯ ಎರಡೂ ಡೋಸ್ ಪಡೆದಿರಬೇಕು. ಹಗಲು-ರಾತ್ರಿ ನಿಗಾ ಇರಿಸಿ, ಟೆಸ್ಟ್‍ಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಂಟೈನ್‍ಮೆಂಟ್ ಝೋನ್ ಮಾಡಿ ಕ್ರಮವನ್ನು ತೆಗೆದುಕೊಂಡಿದ್ದೇವೆ. ತೀವ್ರ ನಿಗಾದಲ್ಲಿರಿಸಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಕೊರೊನಾ ಪಾಸಿಟಿವ್ ಬಂದವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದರು.
ರಾಜ್ಯದ ಗಡಿಜಿಲ್ಲೆಗಳಲ್ಲಿ ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು, ವಿಶೇಷವಾಗಿ ಕೇರಳದಿಂದ 16 ದಿನಗಳಿಂದೀಚೆಗೆ ಬರುವವರನ್ನು ಕಡ್ಡಾಯವಾಗಿ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ತಿಳಿಸಿದರು.

ಏರ್‍ಪೆÇೀರ್ಟ್‍ನಲ್ಲಿ ನಿರ್ಬಂಧ: ವಿಮಾನ ನಿಲ್ದಾಣಗಳು ಸೇರಿದಂತೆ ಕೆಲವು ಕಡೆಗಳಲ್ಲಿ ಕೊರೊನಾ ತಡೆಗೆ ತೀವ್ರ ನಿರ್ಬಂಧಗಳನ್ನು ಹಾಕಲಾಗಿದೆ.
ಕೊರೊನಾ ಹೊಸತಳಿ ಒಮಿಕ್ರಾನ್ ಕಂಡು ಬಂದಿರುವ ದೇಶಗಳಿಂದ ಬಂದವರನ್ನು ವಿಮಾನ ನಿಲ್ದಾಣಗಳಲ್ಲಿ ಶೇ.100ರಷ್ಟು ಟೆಸ್ಟ್ ಗೊಳಪಡಿಸಲಾಗುವುದು. ಟೆಸ್ಟ್‍ನಲ್ಲಿ ನೆಗೆಟಿವ್ ಬಂದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರಗೆ ಬಿಡಬೇಕು ಎಂದು ಕಟ್ಟುನಿಟ್ಟು ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಕಂಟೈನ್‍ಮೆಂಚ್ ಝೋನ್‍ಗೆ ಬಿಟ್ಟು ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ ಎಂದರು.

ಆರೋಗ್ಯ ವಲಯ ಕಾರ್ಯಕರ್ತರಿಗೆ ವಿಶೇಷವಾಗಿ ಬೂಸ್ಟರ್ ಡೋಸ್‍ಗಳನ್ನು ನೀಡಲು ಅನುಮತಿ ನೀಡಲು ಮತ್ತು ತೀರ್ಮಾನ ತಿಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಇಡೀ ದೇಶಕ್ಕೆ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತರಬೇಕಾಗಿದ್ದು, ಕೇಂದ್ರ ಸರ್ಕಾರ ಚಾಲನೆ ನೀಡಿದ ಕೂಡಲೇ ಮಾಡಲಾಗುವುದು, ಕೊರೋನಾ ಹೊಸ ರೂಪಾಂತರಿ ಕಂಡುಬಂದಿರುವ 3 ದೇಶಗಳಿಗೆ ವಿಮಾನ ಹಾರಾಟವನ್ನು ಸದ್ಯಕ್ಕೆ ನಿಷೇಧಿಸಲು ಮನವಿ ಸಲ್ಲಿಸಲಾಗಿದೆ ಎಂದರು.

ಲಸಿಕೆ ಕಾರ್ಯಕ್ರಮ: ಮಾಲ್‍ಗಳು, ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಮಾಲ್, ಸರ್ಕಾರಿ ಕಚೇರಿಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಷನ್ ನೀಡುವಂತಹ ಸಣ್ಣ ಸ್ಥಳವನ್ನು ಕೂಡ ಮಾಡುವಂತಹ ಸೂಚನೆಯನ್ನು ನೀಡಲಾಗಿದೆ ಎಂದರು.

2022ರ ಹೊಸ ವರ್ಷಾಚರಣೆಗೆ ಇನ್ನೊಂದೇ ತಿಂಗಳು ಬಾಕಿ ಇದ್ದು ಅದಕ್ಕೆ ಯಾವ ರೀತಿ ಸರ್ಕಾರ ನಿಯಮ ತರುತ್ತದೆ ಎಂದು ಕೇಳಿದ್ದಕ್ಕೆ ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಗಳನ್ನು ನೋಡಿಕೊಂಡು ಇನ್ನೊಂದು ವಾರ ಕಳೆದು ಮತ್ತೊಂದು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಕೋವಿಡ್ 2ನೇ ಅಲೆ ತಗ್ಗಿದ ನಂತರ ನಿರ್ಬಂಧಗಳನ್ನು ಸಡಿಲ ಮಾಡುವ ಸಂದರ್ಭದಲ್ಲಿ ಮತ್ತೆ ಹೊಸ ರೂಪಾಂತರಿ ಕಾಣಿಸಿಕೊಳ್ಳು ತ್ತಿರುವುದರಿಂದ ಕೆಲವು ನಿರ್ಬಂಧಗಳು ಮುಂದಿನ ದಿನಗಳಲ್ಲಿ ಆಗುವ ಸಾಧ್ಯತೆಯಿದೆ ಎಂದರು.

ವ್ಯಾಕ್ಸಿನ್ ಕೊರತೆಯಿಲ್ಲ: ನಮ್ಮ ರಾಜ್ಯದಲ್ಲಿ ಈಗ 80 ಲಕ್ಷ ವ್ಯಾಕ್ಸಿನ್‍ಗಳಿದ್ದು, ಮೊದಲ ಡೋಸ್ ಶೇ.91ರಷ್ಟಾಗಿದೆ. ಎರಡನೇ ಡೋಸ್‍ಗೆ ಗಮನ ನೀಡಲಾಗುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆಗೆ ಶೇ.70ರಷ್ಟು ತಲುಪುವ ಗುರಿ ಹೊಂದಲಾಗಿದೆ. ಈಗ ಶೇ.58ರಷ್ಟು ವ್ಯಾಕ್ಸಿನೇಷನ್ ತಲುಪಿದೆ. ಇಸ್ರೋ ಸಂಸ್ಥೆಯ ಖಾಸಗೀಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇಸ್ರೋ ಒಂದು ಸಂಸ್ಥೆ, ಹೀಗಾಗಿ ಅದನ್ನು ಖಾಸಗೀಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ಇನ್ನೂ ಒಮಿಕ್ರಾನ್ ಎಂಟ್ರಿ ಕೊಟ್ಟಿಲ್ಲ: ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ರೂಪಾಂತರಿ ಒಮಿಕ್ರಾನ್ ಪ್ರವೇಶಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏರ್‍ಪೆÇೀರ್ಟ್‍ನಲ್ಲಿ ಪ್ರತಿಯೊಬ್ಬರ ಪರೀಕ್ಷೆ ಮಾಡಿಸಿ ಅಲ್ಲಿಯೇ ವರದಿ ನೀಡಲಾಗುತ್ತದೆ. ಪಾಸಿಟಿವ್ ಬಂದವರನ್ನು ಹೊರಗೆ ಬಿಡದೆ ಪ್ರತ್ಯೇಕವಾಗಿಟ್ಟು ಪ್ರಯಾಣಿಕರ ಗಂಟಲು ದ್ರವದ ಜಿನೋಮ್ ಟೆಸ್ಟ್ ಮಾಡಿಸುತ್ತಿದ್ದೇವೆ ಎಂದರು. ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಲು ಕೇಂದ್ರ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಜೊತೆ ಮಾತನಾಡಿದ್ದೇನೆ. ಜಿನೋಮಿಕ್ ಸೀಕ್ವೆನ್ಸ್ ಅನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ನೀಡಿದರೆ ವರದಿ ಬರಲು 8ರಿಂದ 10 ದಿನಗಳು ಬೇಕಾಗುತ್ತದೆ. ಹೀಗಾಗಿ ಡಿಸೆಂಬರ್ 1ರ ವೇಳೆಗೆ ಸ್ಪಷ್ಟವಾಗಿ ತಿಳಿದುಬರಲಿದೆ ಎಂದರು. ದೇಶದಲ್ಲಿರುವ ಎರಡು ದೊಡ್ಡ ಲ್ಯಾಬ್‍ಗೆ ಮತ್ತು ನಾವಿಲ್ಲಿ ನಾಲ್ಕು ಜಿನೋಮಿಕ್ ಸೀಕ್ವೆನ್ಸ್ ಲ್ಯಾಬ್ ತೆರೆಯಲು ಅನುಮತಿ ಕೇಳಿದ್ದೇವೆ ಎಂದರು. ಈಗಾಗಲೇ ಏರ್‍ಪೆÇೀರ್ಟ್, ಕೇರಳ-ಮಹಾರಾಷ್ಟ್ರ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ.

ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕು: ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ ಎಂದು ಡಾ.ಸುಧಾಕರ್ ತಿಳಿಸಿದರು. ಈಗಾಗಲೇ ಜಿನೋಮಿಕ್ ಸೀಕ್ವೆನ್ಸ್‍ಗೆ ಕಳಿಸಿದ್ದೇವೆ. ಡಿಸೆಂಬರ್ 1ರ ವೇಳೆಗೆ ನಮಗೆ ಹೊಸ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ನಿನ್ನೆಯೂ ಕೂಡ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು.

Translate »