ಮೈಸೂರಲ್ಲಿ ಭಾರೀ ಭದ್ರತೆ, ಕಟ್ಟೆಚ್ಚರ
ಮೈಸೂರು

ಮೈಸೂರಲ್ಲಿ ಭಾರೀ ಭದ್ರತೆ, ಕಟ್ಟೆಚ್ಚರ

February 28, 2019

ಮೈಸೂರು: ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತ ಬಾಂಬ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಿ, ಕಟ್ಟೆಚ್ಚರ ವಹಿಸಲಾಗಿದೆ.

ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಿಂದ ಬಂದ ನಿರ್ದೇಶನದಂತೆ ಮಂಗಳವಾರ ಬೆಳಿಗ್ಗೆಯಿಂದಲೇ ರಾಜ್ಯದಾ ದ್ಯಂತ ಕಟ್ಟೆಚ್ಚರ ವಹಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಿಗಾ ಇರಿಸಲಾಗುತ್ತಿದೆ. ಅದರಂತೆ ಮೈಸೂ ರಿನ ರೈಲು ನಿಲ್ದಾಣ, ಬಸ್ ಸ್ಟ್ಯಾಂಡ್ ಗಳು, ರೈಲ್ವೇ ವರ್ಕ್‍ಶಾಪ್, ಪ್ರವಾಸಿ ತಾಣಗಳಾದ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ವಾಣಿಜ್ಯ ಕೇಂದ್ರಗಳಾದ ದೇವರಾಜ ಮಾರುಕಟ್ಟೆ, ಕೆ.ಆರ್. ಸರ್ಕಲ್, ಸಯ್ಯಾಜಿರಾವ್ ರಸ್ತೆ, ಪ್ರಮುಖ ದೇವಾಲಯಗಳು, ಧಾರ್ಮಿಕ ಕೇಂದ್ರ ಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಟ್ಟಡಗಳ ಬಳಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ನಿಗಾ ವಹಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

ಆಂಟಿ ಸಬಾಟಿಕ್ ಚೆಕ್ ಟೀಂ, ಶ್ವಾನ ದಳ, ಬಾಂಬ್ ಪತ್ತೆ ದಳ, ಪಿಸಿಆರ್, ಗರುಡ ವಾಹನಗಳು ಪೆಟ್ರೋಲಿಂಗ್ ನಡೆಸಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾವಹಿಸು ವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Translate »