ಜ.15ರೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಹೈಕಮಾಂಡ್ ನಿರ್ಧಾರ
ಮೈಸೂರು

ಜ.15ರೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಹೈಕಮಾಂಡ್ ನಿರ್ಧಾರ

December 29, 2022

ಮೈಸೂರು,ಡಿ.28(ಎಂಟಿವೈ)- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜ.15ರೊಳಗೆ ಪ್ರಕಟಿಸಲು ಹೈಕಮಾಂಡ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತಿಳಿಸಿದ್ದಾರೆ.

ಮೈಸೂರಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರು ವುದು ಖಚಿತ. ಕಾಂಗ್ರೆಸ್‍ಗೆ ಅಧಿಕಾರ ಒಲಿಯುವುದÀನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಸರ್ಕಾರದ ದುರಾಡಳಿತ, ಮಿತಿ ಮೀರಿದ ಭ್ರಷ್ಟಾಚಾರ, ನಾನಾ ಹಗರಣ, ಕೋಮು ಗಲಭೆ ಸೃಷ್ಟಿಸಲು ನಡೆಸಿದ ಸಂಚು, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಇನ್ನಿತರ ಪ್ರಕರಣಗಳಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ಹಂತಗಳಲ್ಲೂ ವೈಫಲ್ಯ ಕಂಡಿದೆ. ಇದರಿಂದ ಬಿಜೆಪಿ ಕಾರ್ಯಕರ್ತರೇ ಅವರದೇ ಸರ್ಕಾರದ ವಿರುದ್ಧ ಅಸಮಾ ಧಾನಗೊಂಡಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಾಡಿದ ಜನಪರ ಕಾರ್ಯಗಳ ಬಗ್ಗೆ ತಿಳಿದಿರುವ ಮತದಾರರು ಬಿಜೆಪಿ ಬಗ್ಗೆ ಭ್ರಮನಿರಶನ ಹೊಂದಿz್ದÁರೆ. ಈ ಸರ್ಕಾರವನ್ನು ಜನರೇ ಕಿತ್ತೊಗೆಯ ಲಿz್ದÁರೆ. ಎಲ್ಲೆಡೆ ಕಾಂಗ್ರೆಸ್‍ಗೆ ಬೆಂಬಲ ದೊರೆಯುತ್ತಿದೆ.

ದೇಶ ಹಾಗೂ ಸಂಪತ್ತಿನ ರಕ್ಷಣೆಗೆ ಕಾಂಗ್ರೆಸ್ ಅವಶ್ಯಕತೆ ಜನರಿಗೆ ಮನವರಿಕೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಈ ಹಿಂದೆ ನೀಡಿದ್ದ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತ ಎನಿಸಿವೆ. ಅದಕ್ಕಾಗಿಯೇ ಜನರ ಒಲವು ಕಾಂಗ್ರೆಸ್ ಮೇಲೆ ಹೆಚ್ಚಾಗಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿತ ಮತದಾರರು ಹಾಗೂ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯ ದವರ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡುವ ಮೂಲಕ ವಾಮಮಾರ್ಗದಿಂದ ಚುನಾವಣೆ ಗೆಲ್ಲಲು ಸಂಚು ನಡೆಸಿದ್ದಾರೆ. ಆದರೆ, ರಾಜ್ಯದ ಜನತೆ ಬುದ್ಧಿವಂತರಿದ್ದು, ಬಿಜೆಪಿಗೆ ತಕ್ಕ ಪಾಠ ಕಲಿಸಲು ಉತ್ಸುಕರಾಗಿದ್ದಾರೆ ಎಂದರು.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿರುವ ಅಭ್ಯರ್ಥಿಗಳÀ ಮೊದಲ ಪಟ್ಟಿಯನ್ನು ಜನವರಿ 15ರೊಳಗೆ ಪ್ರಕಟಿಸಲು ಹೈಕಮಾಂಡ್ ಚಿಂತನೆ ನಡೆಸಿದೆ. ಈಗಾಗಲೇ ಆಯಾಯ ಜಿ¯್ಲÉಗಳ ವೀP್ಷÀಕರು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಿ ಡಿ.31ರೊಳಗೆ ವರದಿ ಕೊಡಲಿz್ದÁರೆ. ಮೈಸೂರು ಭಾಗದಲ್ಲಿ ಹಾಸನ, ಕೊಡಗು, ಮಂಡ್ಯ, ಮೈಸೂರು ಗ್ರಾಮಾಂತರ ಮುಗಿದಿದ್ದು, ಚಾಮರಾಜನಗರ, ಮೈಸೂರು ನಗರ ಮುಗಿದ ಮೇಲೆ ಕೆಪಿಸಿಸಿ ಅಧ್ಯP್ಷÀರು ಮತ್ತು ಪ್ರತಿಪP್ಷÀದ ನಾಯಕರಿಗೆ ವರದಿ ಕೊಡಲಿz್ದÁರೆ. ನಂತರ ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆಯ ಬಳಿಕ ಹೈಕಮಾಂಡ್‍ಗೆ ಪಟ್ಟಿ ಕಳುಹಿಸಲಾಗುತ್ತದೆ ಎಂದು ವಿವರಿಸಿದರು.

ಮಾತಿನ ಚಕಮಕಿಗೆ ಬೇಸರವಿದೆÀ: ನಂಜನಗೂಡು ಕ್ಷೇತ್ರದ ಟಿಕೆಟ್‍ಗೆ ಸಂಬಂಧಿಸಿದಂತೆ ಎರಡು ಗುಂಪಿನ ಕಾರ್ಯಕರ್ತರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದು ಬೇಸರವಾಗಿದೆ. ಈ ವಿಚಾರಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸುವುದಾಗಿ ಸ್ಪಷ್ಟಪಡಿಸಿದರು.

Translate »